ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾರುಖ್ ಮಗನ ರಕ್ಷಣೆಗೆ ₹25 ಕೋಟಿ ಲಂಚಕ್ಕೆ ಬೇಡಿಕೆ: ಸಮೀರ್ ವಾಂಖೆಡೆ ವಿರುದ್ಧ CBI ಕೇಸ್

Published 12 ಮೇ 2023, 13:59 IST
Last Updated 12 ಮೇ 2023, 13:59 IST
ಅಕ್ಷರ ಗಾತ್ರ

ನವದೆಹಲಿ: ಬಾಲಿವುಡ್‌ ನಟ ಶಾರುಖ್‌ ಖಾನ್‌ ಅವರ ಮಗ ಆರ್ಯನ್‌ ಖಾನ್‌ ಅವರನ್ನು ಡ್ರಗ್ಸ್‌ ಪಾರ್ಟಿ ಪ್ರಕರಣದಿಂದ ರಕ್ಷಿಸಲು ₹ 25 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಮಾದಕ ದ್ರವ್ಯ ನಿಯಂತ್ರಣ ದಳದ (ಎನ್‌ಸಿಬಿ) ಮಾಜಿ ಅಧಿಕಾರಿ ಸಮೀರ್‌ ವಾಂಖೆಡೆ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಎಫ್‌ಐಆರ್‌ ದಾಖಲಿಸಿಕೊಂಡಿದೆ.

ಕಾರ್ಡೇಲಿಯಾ ಹಡಗಿನ ಮೇಲೆ ದಾಳಿ ನಡೆಸಿದ್ದ ವಾಂಖೆಡೆ ನೇತೃತ್ವದ ಎನ್‌ಸಿಬಿ ಅಧಿಕಾರಿಗಳ ತಂಡ, ಹಡಗಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಬೆದರಿಕೆ ಹಾಕಿತ್ತು ಮತ್ತು ₹ 25 ಕೋಟಿ ನೀಡುವಂತೆ ಆರ್ಯನ್‌ ಖಾನ್‌ ಕುಟುಂಬಕ್ಕೆ ಬೇಡಿಕೆ ಇಟ್ಟಿತ್ತು. ಭ್ರಷ್ಟಾಚಾರ ಮತ್ತು ವಿವಿಧ ನಿಯಮಗಳ ಅಡಿಯಲ್ಲಿ ವಾಂಖೆಡೆ ಹಾಗೂ ಇತರ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಸಿಬಿಐ ಉನ್ನತ ಮೂಲಗಳು ತಿಳಿಸಿವೆ.

'ಒಟ್ಟು ₹ 25 ಕೋಟಿಯಲ್ಲಿ ₹ 50 ಲಕ್ಷವನ್ನು ಖಾನ್‌ ಕುಟುಂಬ ಎನ್‌ಸಿಬಿ ಅಧಿಕಾರಿಗಳಿಗೆ ನೀಡಿತ್ತು. ಆರ್ಯನ್‌ ರಕ್ಷಣೆಗಾಗಿ ₹ 50 ಲಕ್ಷ ನೀಡಿರುವುದಾಗಿ ಅವರ ಕುಟುಂಬ ಹೇಳಿಕೆ ನೀಡಿದೆ' ಎಂದೂ ಮಾಹಿತಿ ನೀಡಿವೆ.

ಈ ಕುರಿತು ಪ್ರತಿಕ್ರಿಯೆ ಪಡೆಯಲು ವಾಂಖೆಡೆ ಸಂಪರ್ಕಕ್ಕೆ ಸಿಗಲಿಲ್ಲ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮುಂಬೈ, ದೆಹಲಿ, ರಾಂಚಿ, ಕಾನ್ಪುರ ಸೇರಿದಂತೆ 29ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ.

2021ರ ಅಕ್ಟೋಬರ್ 2ರಂದು ವಾಂಖೆಡೆ ನೇತೃತ್ವದ ತಂಡವು ಕ್ರೂಸ್ ಹಡಗಿನ ಮೇಲೆ ದಾಳಿ ನಡೆಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT