ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮಮಂದಿರ ನಿರ್ಮಾಣಕ್ಕೆ ಮಾರ್ಚ್‌ವರೆಗೆ ₹900 ಕೋಟಿ ಖರ್ಚು: ಟ್ರಸ್ಟ್

Published 8 ಅಕ್ಟೋಬರ್ 2023, 3:04 IST
Last Updated 8 ಅಕ್ಟೋಬರ್ 2023, 3:04 IST
ಅಕ್ಷರ ಗಾತ್ರ

ಅಯೋಧ್ಯೆ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರಕ್ಕೆ 2023 ಮಾರ್ಚ್‌ವರೆಗೆ ₹900 ಕೋಟಿ ಖರ್ಚು ಮಾಡಲಾಗಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮಾಹಿತಿ ನೀಡಿದೆ.

ರಾಮಮಂದಿರ ನಿರ್ಮಾಣಕ್ಕೆ 2020 ಫೆಬ್ರುವರಿ 5ರಿಂದ 2023 ಮಾರ್ಚ್ 31ರವರೆಗೆ ₹900 ಕೋಟಿ ಖರ್ಚು ಮಾಡಲಾಗಿದ್ದು, ಇನ್ನೂ ₹3,000 ಕೋಟಿ ಬ್ಯಾಂಕ್ ಖಾತೆಯಲ್ಲಿ ಹೊಂದಿದೆ ಎಂದು ಟ್ರಸ್ಟ್ ಅಧಿಕಾರಿಗಳು ತಿಳಿಸಿದ್ದಾರೆ.

ಶನಿವಾರ ನಡೆದ ಸಭೆಯಲ್ಲಿ ವಿದೇಶಿ ಕರೆನ್ಸಿ ದೇಣಿಗೆ ಸ್ವೀಕಾರದ ಪ್ರಕ್ರಿಯೆ ಸೇರಿದಂತೆ 18 ಅಂಶಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ.

ಅಯೋಧ್ಯೆ ರಾಮ ಮಂದಿರದಲ್ಲಿ ಮುಂದಿನ ವರ್ಷ ಜನವರಿ 22ರಂದು ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯುವ ನಿರೀಕ್ಷೆಯಿದ್ದು, ಇದಕ್ಕಾಗಿ ಸಮಿತಿ ರಚಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ 10,000 ಗಣ್ಯರು ಭಾಗಿಯಾಗುವ ಸಾಧ್ಯತೆಯಿದೆ.

2025 ಜನವರಿ ವೇಳೆಗೆ ಮೂರು ಹಂತಗಳಲ್ಲಿ ಮಂದಿರದ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT