ನವದೆಹಲಿ: ಬಿಜೆಪಿ, ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದಲೇ ದೇಶದಲ್ಲಿ ಕಾನೂನು ಸುವ್ಯವಸ್ಥೆಯ ಸಮಸ್ಯೆ ಉದ್ಭವಿಸುತ್ತಿರುವುದರಿಂದ, ಆರ್ಎಸ್ಎಸ್ ನಿಷೇಧಿಸಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಹೇಳಿದ್ದಾರೆ.

ಸರ್ದಾರ್ ವಲ್ಲಭಭಾಯ್ ಪಟೇಲ್ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬೆನ್ನಿಗೆ ಖರ್ಗೆ ತಿರುಗೇಟು ನೀಡಿದ್ದಾರೆ.

ಮಹಾತ್ಮ ಗಾಂಧಿ ಅವರ ಹತ್ಯೆಯ ಬಳಿಕ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್ಎಸ್ಎಸ್) ಟೀಕಿಸಿದ್ದ ಪಟೇಲ್ ಅವರ ಹೇಳಿಕೆಗಳನ್ನು ಉಲ್ಲೇಖಿಸಿದ್ದಾರೆ.

ಆರ್ಎಸ್ಎಸ್ ನಿಷೇಧ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಖರ್ಗೆ, ‘ನಿಷೇಧಿಸಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ’ ಎಂದಿದ್ದಾರೆ.
.ಬ್ರಿಮ್ಸ್ ಅಕ್ರಮ; ನಿವೃತ್ತ ನ್ಯಾಯಾಧೀಶರಿಂದ ತನಿಖೆ: ಈಶ್ವರ ಖಂಡ್ರೆ .ಮಂಗಳೂರು | ಪ್ರಚೋದನಕಾರಿ ಪೋಸ್ಟ್: VHP ಮುಖಂಡ ಶರಣ್ ಪಂಪ್ವೆಲ್ ವಿರುದ್ಧ ಪ್ರಕರಣ.
‘ಇಂದು ಸರ್ದಾರ್ ವಲ್ಲಭಭಾಯ್ ಪಟೇಲ್ ಜನ್ಮದಿನ ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪುಣ್ಯತಿಥಿ. ‘ಉಕ್ಕಿನ ಮನುಷ್ಯ’ ಮತ್ತು ‘ಉಕ್ಕಿನ ಮಹಿಳೆ’ ದೇಶಕ್ಕೆ ಅಪಾರ ಕೊಡುಗೆ ನೀಡಿದ್ದು, ಏಕತೆ ಕಾಪಾಡಿಕೊಳ್ಳಲು ಶ್ರಮಿಸಿದ್ದಾರೆ. ಇದು ಕಾಂಗ್ರೆಸ್ನ ಐತಿಹ್ಯ ಮತ್ತು ಕಾಣಿಕೆ’ ಎಂದು ಹೇಳಿದರು.

‘ಮಹಾತ್ಮ ಗಾಂಧಿ ಅವರ ಹತ್ಯೆಯ ದುರಂತಕ್ಕೆ ಕಾರಣವಾದ ವಾತಾವರಣವನ್ನು ಆರ್ಎಸ್ಎಸ್ ಸೃಷ್ಟಿಸಿದೆ’ ಎಂದು ಶ್ಯಾಮಾ ಪ್ರಸಾದ್ ಮುಖರ್ಜಿ ಅವರಿಗೆ ಆಗಿನ ಗೃಹ ಸಚಿವ ಪಟೇಲ್ ಅವರು ಬರೆದ ಪತ್ರವನ್ನು ಖರ್ಗೆ ಉಲ್ಲೇಖಿಸಿದ್ದಾರೆ.
.ಪ್ರೀತಿಯಲ್ಲಿ ಇರೋ ಸುಖ ಗೊತ್ತೇ ಇರಲಿಲ್ಲ: ಕಾವ್ಯ ಜೊತೆ ಗಿಲ್ಲಿ ಸಖತ್ ಡ್ಯಾನ್ಸ್.ಪಥಸಂಚಲನವನ್ನು ಆರ್ಎಸ್ಎಸ್ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ: ಪ್ರಿಯಾಂಕ್ ಖರ್ಗೆ.ತೆಲಂಗಾಣ | ಮೊಹಮ್ಮದ್ ಅಜರುದ್ದೀನ್ ಪ್ರಮಾಣ: ರೆಡ್ಡಿ ಸಂಪುಟದ ಮೊದಲ ಮುಸ್ಲಿಂ ಸಚಿವ.ಕುರ್ಚಿ ಆಸೆಗೆ ಜನಸಾಮಾನ್ಯರ ರಕ್ತ ಇನ್ನೆಷ್ಟು ಹೀರುತ್ತೀರಿ?: ಡಿಸಿಎಂಗೆ ಆರ್.ಅಶೋಕ.ತುಳಸಿ ಹಬ್ಬದಂದು ಈ ತಪ್ಪುಗಳನ್ನು ಮಾಡಬೇಡಿ: ಇಲ್ಲಿದೆ ಮಹತ್ವದ ಮಾಹಿತಿ.ಪ್ರಧಾನ ಮಂತ್ರಿ ಕುಸುಮ್ ಯೋಜನೆ: ಸೌರ ಪಂಪ್ಸೆಟ್ ಸ್ಥಾಪನೆಗೆ ಸಿಗಲಿದೆ ಸಹಾಯಧನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.