ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡಿನಲ್ಲಿ ಆರೆಸ್ಸೆಸ್‌ ಪಥಸಂಚಲನದ ಸದ್ದು

Last Updated 16 ಏಪ್ರಿಲ್ 2023, 15:58 IST
ಅಕ್ಷರ ಗಾತ್ರ

ಚೆನ್ನೈ (ಪಿಟಿಐ): ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರೆಸ್ಸೆಸ್‌) ಪಥ ಸಂಚಲನಕ್ಕೆ ಸುಪ್ರೀಂ ಕೋರ್ಟ್‌ನಿಂದ ಹಸಿರು ನಿಶಾನೆ ಸಿಕ್ಕಿದ ಬೆನ್ನಲ್ಲೇ ತಮಿಳುನಾಡಿನಾದ್ಯಂತ 45 ಸ್ಥಳಗಳಲ್ಲಿ ಭಾನುವಾರ ಆರೆಸ್ಸೆಸ್‌ನ ಪಥ ಸಂಚಲನ ನಡೆಯಿತು. ಪಥ ಸಂಚಲನವು ತನ್ನ ನಿಯಮಿತ ತರಬೇತಿಯ ಭಾಗವಾಗಿದೆ ಎಂದು ಆರೆಸ್ಸೆಸ್‌ ಹೇಳಿದೆ.

ಆರೆಸ್ಸೆಸ್‌ ಸ್ವಯಂಸೇವಕರು ಬಿಳಿ ಬಣ್ಣದ ಅಂಗಿ ಮತ್ತು ಖಾಕಿ ಪ್ಯಾಂಟ್ ಧರಿಸಿ ಪಾಲ್ಗೊಂಡಿದ್ದರು. ಪಥ ಸಂಚಲನ ನಡೆಯುವ ಮಾರ್ಗದ ಉದ್ದಕ್ಕೂ ಪೊಲೀಸ್ ಭದ್ರತೆ ನಿಯೋಜಿಸಲಾಗಿತ್ತು. ಪಥ ಸಂಚಲನ ಶಾಂತಿಯುತವಾಗಿ ನಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಚೆನ್ನೈ, ಮದುರೈ, ಕಾಂಚಿಪುರಂ ಮತ್ತು ಚೆಂಗಲ್‌ಪೇಟೆ ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ಈ ಪಥಸಂಚಲನದಲ್ಲಿ ಕೇಂದ್ರ ಸಚಿವ ಎಲ್. ಮುರುಗನ್ ಪಾಲ್ಗೊಂಡರು.

ಆರೆಸ್ಸೆಸ್‌ಗೆ ರಾಜ್ಯದಲ್ಲಿ ಪಥಸಂಚಲನ ನಡೆಸಲು ಅನುಮತಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್, ಇದೇ ಏಪ್ರಿಲ್‌ 11ರಂದು ಎತ್ತಿಹಿಡಿದಿದೆ.

ದಿನಗೂಲಿ ಕಾರ್ಮಿಕರು, ವಿದ್ಯಾರ್ಥಿಗಳು, ಸಮಾಜದಲ್ಲಿ ಉತ್ತಮ ಸ್ಥಾನದಲ್ಲಿರುವ ವೃತ್ತಿಪರರು, ಕೈಗಾರಿಕೆ, ಕಚೇರಿಗಳು ಹಾಗೂ ವಿವಿಧ ಸಂಸ್ಥೆಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳು ಸ್ವಯಂಸೇವಕರಾಗಿ ಉತ್ತಮ ತರಬೇತಿ ಪಡೆದು, ಈ ಸಂಘಟನೆಯ ಸದಸ್ಯರಾಗಿದ್ದಾರೆ ಎಂದು ಆರೆಸ್ಸೆಸ್‌ ಹೇಳಿಕೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT