ನವದೆಹಲಿ: ಸಂವಿಧಾನದ ಪೀಠಿಕೆಯಿಂದ 'ಸಮಾಜವಾದಿ' ಮತ್ತು 'ಜಾತ್ಯತೀತ' ಪದಗಳನ್ನು ಪುನರ್ ಪರಿಶೀಲಿಸುವಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಹೇಳಿಕೆಯನ್ನು ಕಾಂಗ್ರೆಸ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನವನ್ನು ಆರ್ಎಸ್ಎಸ್ ಎಂದಿಗೂ ಅಂಗೀಕರಿಸಿಲ್ಲ ಎಂದು ಹೇಳಿದೆ.

ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಬರೆದುಕೊಂಡಿದ್ದು, 'ಸಂವಿಧಾನವನ್ನು ನಾಶ ಮಾಡುವ ಆರ್ಎಸ್ಎಸ್ನ ಪಿತೂರಿ ಇದಾಗಿದೆ' ಎಂದು ಆರೋಪಿಸಿದ್ದಾರೆ.

'ಭಾರತದ ಸಂವಿಧಾನವನ್ನು ಆರ್ಎಸ್ಎಸ್ ಎಂದೂ ಅಂಗೀಕರಿಸಿಲ್ಲ. 1949ರಲ್ಲಿ ಅಂಬೇಡ್ಕರ್, ನೆಹರೂ ಅವರಿಂದ ರಚನೆಯಾಗಿರುವ ಸಂವಿಧಾನದ ಮೇಲೆ ದಾಳಿ ನಡೆಸಿದೆ. ಆರ್ಎಸ್ಎಸ್ನ ಮಾತುಗಳಲ್ಲಿ ಹೇಳುವುದಾದರೆ ಸಂವಿಧಾನವು ಮನುಸ್ಮೃತಿಯಿಂದ ಪ್ರೇರಣೆ ಪಡೆದಿಲ್ಲ' ಎಂದು ವಾಗ್ದಾಳಿ ನಡೆಸಿದ್ದಾರೆ.

'ನೂತನ ಸಂವಿಧಾನಕ್ಕಾಗಿ ಆರ್ಎಸ್ಎಸ್ ಹಾಗೂ ಬಿಜೆಪಿ ಪದೇ ಪದೇ ಕರೆ ನೀಡುತ್ತಿದೆ. 2024ರ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರ ಪ್ರಚಾರದ ಕೂಗು ಇದಾಗಿತ್ತು. ಅದನ್ನು ದೇಶದ ಜನರು ತಿರಸ್ಕರಿಸಿದ್ದಾರೆ. ಆದರೂ ಸಂವಿಧಾನದ ಮೂಲ ಆಶಯವನ್ನು ಬದಲಿಸುವ ಹುನ್ನಾರವನ್ನು ಆರ್ಎಸ್ಎಸ್ ಮಾಡುತ್ತಲೇ ಇದೆ' ಎಂದು ಆರೋಪಿಸಿದ್ದಾರೆ.

'ಆರ್ಎಸ್ಎಸ್ನ ಪದಾಧಿಕಾರಿಯೊಬ್ಬರು ಎತ್ತಿರುವ ವಿಷಯದ ಕುರಿತು 2024ರಲ್ಲೇ ಸುಪ್ರಿಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ತೀರ್ಪು ನೀಡಿದ್ದರು' ಎಂದು ಅವರು ಉಲ್ಲೇಖಿಸಿದ್ದಾರೆ.

ಸಂವಿಧಾನದ ಪೀಠಿಕೆಯಿಂದ 'ಸಮಾಜವಾದಿ' ಮತ್ತು 'ಜಾತ್ಯತೀತ' ಪದಗಳನ್ನು ಪುನರ್ ಪರಿಶೀಲಿಸುವಂತೆ ಆರ್ಎಸ್ಎಸ್ನ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಹೇಳಿಕೆ ನೀಡಿದ್ದರು.' ಈ ಪದಗಳು ಅಂಬೇಡ್ಕರ್ ರಚಿಸಿದ ಸಂವಿಧಾನದ ಭಾಗವಾಗಿರಲಿಲ್ಲ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಹೇರಿದ ಸಂದರ್ಭದಲ್ಲಿ ಈ ಪದಗಳನ್ನು ಸೇರಿಸಲಾಗಿತ್ತು' ಎಂದು ಅವರು ಹೇಳಿದ್ದರು.
.ಸಂವಿಧಾನ ಪೀಠಿಕೆ: ಭವಿಷ್ಯದ ಜೀವನ ವಿಧಾನದ ಕನ್ನಡಿ.ಸಂವಿಧಾನದ ಪ್ರಸ್ತಾವನೆಯಿಂದ 'ಸಮಾಜವಾದಿ, ಜಾತ್ಯಾತೀತ' ಪದ ತೆಗೆಯುವಂತೆ RSS ಆಗ್ರಹ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.