ನಾಗ್ಪುರದಲ್ಲಿ (ಆರ್‌ಎಸ್‌ಎಸ್ ಕೇಂದ್ರ ಕಚೇರಿ) ಮುದ್ರಿತವಾದದ್ದು ಕಾರ್ಯರೂಪಕ್ಕೆ ಬರುವುದಿಲ್ಲ. ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರೆ, ನೀವು ಸಂವಿಧಾನ ರಚನಾ ಸಭೆಯಲ್ಲಿ ನಡೆದ ಚರ್ಚೆಗಳನ್ನು ಓದಬೇಕು. ಸಮಾಜವಾದ ಮತ್ತು ಜಾತ್ಯತೀತ ಮೌಲ್ಯಗಳು ಸಂವಿಧಾನದ ಅವಿಭಾಜ್ಯ ಭಾಗಗಳೇ ಆಗಿವೆ. ಬಹುಶಃ ಈ ಬಗ್ಗೆ ಅವರು ಓದಿಲ್ಲ.
ಮನೋಜ್‌ಕುಮಾರ್ ಝಾ, ಆರ್‌ಜೆಡಿ ಸಂಸದ
ಸಂವಿಧಾನವನ್ನು ಬುಡಮೇಲು ಮಾಡಬೇಕು ಹಾಗೂ ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಬೇಕು ಎಂಬುದು ಆರ್‌ಎಸ್‌ಎಸ್‌ನ ಬಹುದಿನದ ಗುರಿ. ದತ್ತಾತ್ತೇಯ ಹೊಸಬಾಳೆ ಅವರ ಹೇಳಿಕೆ ಈ ಪಿತೂರಿಯನ್ನು ಬಹಿರಂಗಪಡಿಸಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಳ್ಳದ ಆರ್‌ಎಸ್‌ಎಸ್ ಈಗ ಸಂವಿಧಾನದಲ್ಲಿನ ಮೂಲಭೂತ ತತ್ವಗಳನ್ನು ತೆಗೆದುಹಾಕಲು ಸಲಹೆ ನೀಡುತ್ತಿದೆ.