ಬುಧವಾರ, 17 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಆರ್‌ಎಸ್‌ಎಸ್‌: 12ರಿಂದ ಪ್ರಾಂತ್ಯ ಪ್ರಚಾರಕರ ಸಭೆ

Published 5 ಜುಲೈ 2024, 14:37 IST
Last Updated 5 ಜುಲೈ 2024, 14:37 IST
ಅಕ್ಷರ ಗಾತ್ರ

ನವದೆಹಲಿ: ಜಾರ್ಖಂಡ್‌ನ ರಾಂಚಿಯಲ್ಲಿ ಜುಲೈ 12ರಿಂದ 14ರವರೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಪ್ರಾಂತ್ಯ ಪ್ರಚಾರಕರ ಸಭೆ ನಡೆಯಲಿದ್ದು, ಸಂಘದ ಮುಖ್ಯಸ್ಥ ಮೋಹನ್‌ ಭಾಗವತ್‌ ಭಾಗವಹಿಸಲಿದ್ದಾರೆ. 

‘ಮೇ–ಜೂನ್‌ನಲ್ಲಿ ನಡೆದ ಆರ್‌ಎಸ್‌ಎಸ್‌ ತರಬೇತಿ ಕಾರ್ಯಕ್ರಮದ ಕುರಿತು ಎಲ್ಲ ಪ್ರಾಂತೀಯ ಪ್ರಚಾರಕರು ವರದಿ ನೀಡಲಿದ್ದು, ಸಭೆಯಲ್ಲಿ ಪರಾಮರ್ಶೆ ನಡೆಸಲಾಗುತ್ತದೆ’ ಎಂದು ಆರ್‌ಎಸ್‌ಎಸ್‌ ರಾಷ್ಟ್ರೀಯ ಪ್ರಚಾರ ಮುಖ್ಯಸ್ಥ ಸುನೀಲ್‌ ಅಂಬೇಕರ್‌ ಅವರು ಶುಕ್ರವಾರ ತಿಳಿಸಿದ್ದಾರೆ.

‘ಮೋಹನ್‌ ಭಾಗವತ್‌ ಅವರು 2024–25ರಲ್ಲಿ ಕೈಗೊಳ್ಳುವ ಪ್ರವಾಸದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು. 2025–26ರಲ್ಲಿ ನಡೆಯಲಿರುವ ಆರ್‌ಎಸ್‌ಎಸ್‌ನ ಶತಮಾನೋತ್ಸವ ಸಂಭ್ರಮಾಚರಣೆಯ ಬಗ್ಗೆ ಯೋಜನೆ ರೂಪಿಸಲಾಗುವುದು’ ಎಂದು ಹೇಳಿದರು.

ಆರ್‌ಎಸ್‌ಎಸ್‌ ಸಂಘಟನೆಯು ದೇಶದಲ್ಲಿ ಒಟ್ಟು 46 ಪ್ರಾಂತ್ಯಗಳನ್ನು ಹೊಂದಿದ್ದು, ಎಲ್ಲ ಪ್ರಾಂತ್ಯಗಳ ಪ್ರಚಾರಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT