ಪಾಲಕ್ಕಾಡ್(ಕೇರಳ): ಜಿಲ್ಲೆಯ ಮಂಬರಂನಲ್ಲಿ ಸೋಮವಾರ ಬೆಳಿಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕಾರ್ಯಕರ್ತರೊಬ್ಬರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಜಿತ್ (27) ಹತ್ಯೆಯಾದವರು. ಬೆಳಿಗ್ಗೆ 9 ಗಂಟೆಗೆ ಪತ್ನಿಯನ್ನು ಕೆಲಸದಸ್ಥಳಕ್ಕೆ ಕರೆದುಕೊಂಡು ಹೋಗುತ್ತಿದ್ದಾಗ, ಪತ್ನಿಯ ಎದುರೇ ಅವರ ಕತ್ತು ಕೊಯ್ದು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕೃತ್ಯದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಕಾರ್ಯಕರ್ತರ ಕೈವಾಡವಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

ಎಲಪ್ಪುಳ್ಳಿ ಮೂಲದ ಸಂಜಿತ್, ದ್ವಿಚಕ್ರ ವಾಹನದಲ್ಲಿ ಪತ್ನಿಯನ್ನು ಕರೆದುಕೊಂಡು ಹೋಗುತ್ತಿದ್ದರು. ವಾಹನದಲ್ಲಿ ಹಿಂಬಾಲಿಸಿದ ದುಷ್ಕರ್ಮಿಗಳು ಅವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಕೆಳಗೆ ಬೀಳಿಸಿ, ಪತ್ನಿಯ ಎದುರೇ ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

’ಇದೊಂದು ಯೋಜಿತ ಕೊಲೆ. ಪೊಲೀಸ್ ಮತ್ತು ರಾಜ್ಯ ಸರ್ಕಾರದ ಭದ್ರತಾ ವೈಫಲ್ಯದಿಂದಾಗಿಯೇ ರಾಜ್ಯದಲ್ಲಿ ಇಂತಹ ಘಟನೆಗಳು ಹೆಚ್ಟುತ್ತಿವೆ‘ ಎಂದುಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್ ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.