ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರುಬಯ್ಯ ಸಯೀದ್‌ ಅಪಹರಣ: ಯಾಸಿನ್‌ ಮಲಿಕ್‌ನನ್ನು ಕೋರ್ಟ್‌ಗೆ ಹಾಜರುಪಡಿಸಲು ಆದೇಶ

Last Updated 21 ಸೆಪ್ಟೆಂಬರ್ 2022, 12:56 IST
ಅಕ್ಷರ ಗಾತ್ರ

ಜಮ್ಮು: 1989ರಲ್ಲಿ ಅಂದಿನ ಕೇಂದ್ರ ಗೃಹ ಸಚಿವರಾಗಿದ್ದ ಮುಫ್ತಿ ಮಹಮ್ಮದ್‌ ಸಯೀದ್‌ ಅವರ ಪುತ್ರಿ ರುಬಯ್ಯ ಸಯೀದ್‌ ಅವರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಜೆಕೆಎಲ್‌ಎಫ್‌ ಮುಖ್ಯಸ್ಥ ಯಾಸಿನ್‌ ಮಲಿಕ್‌ನನ್ನು ಅಕ್ಟೋಬರ್‌ 20ರಂದು ತನ್ನ ಮುಂದೆ ಖುದ್ದಾಗಿ ಹಾಜರುಪಡಿಸುವಂತೆ ಇಲ್ಲಿನ ವಿಶೇಷ ನ್ಯಾಯಾಲಯ ಬುಧವಾರ ಸಿಬಿಐಗೆ ಆದೇಶಿಸಿದೆ.

ಸದ್ಯ ಯಾಸೀನ್‌ದೆಹಲಿಯ ತಿಹಾರ್‌ ಜೈಲಿನಲ್ಲಿದ್ದಾನೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳ ವಿಚಾರಣೆ ನಡೆಸಲು, ಯಾಸಿನ್‌ನನ್ನು ಹಾಜರುಪಡಿಸಲುಕೋರ್ಟ್‌ ಸಿಬಿಐಗೆ ವಾರಂಟ್‌ ನೀಡಿದೆ.

‘ಎಲ್ಲಾ ಆರೋಪಿಗಳನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಹಾಜರುಪಡಿಸುವಂತೆ ಹೈಕೋರ್ಟ್‌ನ ನಿರ್ದಿಷ್ಟ ನಿರ್ದೇಶನ ನೀಡಿದ್ದರೂ, ಯಾಸಿನ್ ಮಲಿಕ್‌ನನ್ನು ಖುದ್ದಾಗಿ ಹಾಜರುಪಡಿಸಲು ಸೂಚನೆ ನೀಡಲಾಗಿದೆ’ ಎಂದು ಸಿಬಿಐ ಪರ ವಕೀಲೆ ಮೋನಿಕಾ ಕೊಹ್ಲಿ ಹೇಳಿದರು.

‘ರುಬಯ್ಯ ಸಯೀದ್ ಅವರು ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ವೇಳೆ ಅವರು ತಮ್ಮ ಭಯಾನಕವಾದ ಗತ ಜೀವನವನ್ನು ನೆನಪಿಸಿಕೊಳ್ಳಲು ಇಷ್ಟಪಡಲಿಲ್ಲ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT