ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರದಲ್ಲಿ ಬಿಜೆಪಿಯಿಂದ 'ಗೂಂಡಾ ರಾಜ್ಯ': ಖರ್ಗೆ ಆರೋಪ

Published 10 ಫೆಬ್ರುವರಿ 2024, 11:19 IST
Last Updated 10 ಫೆಬ್ರುವರಿ 2024, 11:19 IST
ಅಕ್ಷರ ಗಾತ್ರ

ನವದೆಹಲಿ: ಮಹಾರಾಷ್ಟ್ರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಬಿಜೆಪಿಯಿಂದ 'ಗೂಂಡಾ ರಾಜ್ಯ' ನಡೆಯುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಫೇಸ್‌ಬುಕ್ ಲೈವ್ ವೇಳೆ ನಾಯಕನ ಗುಂಡಿಕ್ಕಿ ಹತ್ಯೆ ಮತ್ತು ಪತ್ರಕರ್ತರೊಬ್ಬರ ಕಾರಿನ ಮೇಲೆ ದಾಳಿ ನಡೆಸಿದ ಘಟನೆಗಳ ಬೆನ್ನಲ್ಲೇ ಮುಖ್ಯಮಂತ್ರಿ ಏಕನಾಥ ಶಿಂದೆ ಹಾಗೂ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಫೇಸ್‌ಬುಕ್ ಲೈವ್‌ನಲ್ಲಿ ಮುಖಂಡರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಪತ್ರಕರ್ತನ ವಿರುದ್ಧ ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಪೊಲೀಸ್ ಠಾಣೆಯಲ್ಲಿ ಬಿಜೆಪಿ ಶಾಸಕನೊಬ್ಬ ಮತ್ತೊಬ್ಬ ರಾಜಕಾರಣಿ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಆಡಳಿತದಲ್ಲಿ ಮಹಾರಾಷ್ಟ್ರದಲ್ಲಿ ಕಾನೂನು ನೆಲೆನಿಂತಿತ್ತು. ಇದರಿಂದ ರಾಜ್ಯದಲ್ಲಿ ಅಭಿವೃದ್ಧಿ ಸಾಧ್ಯವಾಗಿತ್ತು ಎಂದು ಅವರು ಹೇಳಿದ್ದಾರೆ.

ಆದರೆ ಜಾರಿ ನಿರ್ದೇಶನಾಲಯದ ಬಲದಿಂದ ರಚನೆಗೊಂಡ ಬಿಜೆಪಿ ಸರ್ಕಾರವು ರಾಜ್ಯದಲ್ಲಿ ಗೂಂಡಾ ರಾಜ್ಯದ ಮೂಲಕ ಜನರ ಭದ್ರತೆಯೊಂದಿಗೆ ಆಟವಾಡುತ್ತಿದೆ ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT