ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಜ್ಮೀರ್‌ ಬಳಿ ಹಳಿ ತಪ್ಪಿದ ಸಬರಮತಿ– ಆಗ್ರಾ ಸೂಪರ್‌ಫಾಸ್ಟ್‌ ರೈಲು

Published 18 ಮಾರ್ಚ್ 2024, 4:59 IST
Last Updated 18 ಮಾರ್ಚ್ 2024, 4:59 IST
ಅಕ್ಷರ ಗಾತ್ರ

ಅಜ್ಮೀರ್: ಅಜ್ಮೀರ್ ಬಳಿ ಸಬರಮತಿ– ಆಗ್ರಾ ಸೂಪರ್‌ಫಾಸ್ಟ್‌ ರೈಲಿನ ನಾಲ್ಕು ಬೋಗಿಗಳು ಹಳಿತಪ್ಪಿದ ಘಟನೆ ಸೋಮವಾರ ಬೆಳಿಗ್ಗೆ ಸಂಭವಿಸಿದೆ. 

ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ರೈಲು ಆಗ್ರಾಕ್ಕೆ ತೆರಳುತ್ತಿತ್ತು. ಅಜ್ಮೀರ್ ನಿಲ್ದಾಣವನ್ನು ದಾಟಿ ಮದರ್ ನಿಲ್ದಾಣಕ್ಕೆ ಹೋಗುತ್ತಿದ್ದಾಗ ಬೆಳಗಿನ ಜಾವ 1 ಗಂಟೆಯ ಹೊತ್ತಿಗೆ ರೈಲಿನ 4 ಬೋಗಿಗಳು ಹಳಿ ತಪ್ಪಿವೆ. ರೈಲು ಹಳಿ ತಪ್ಪಲು ಕಾರಣ ಏನು ಎನ್ನುವುದು ತಿಳಿದುಬಂದಿಲ್ಲ ಎಂದು ವಾಯವ್ಯ ರೈಲ್ವೆ ವಲಯದ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಶಶಿ ಕಿರಣ್ ಪಿಟಿಐಗೆ ತಿಳಿಸಿದ್ದಾರೆ.

ಘಟನೆ ನಡೆದ ಸ್ಥಳದಲ್ಲಿ ಹಳಿಯನ್ನು ದುರಸ್ಥಿ ಮಾಡಲಾಗುತ್ತಿದೆ. ಅಜ್ಮೀರ್ ನಿಲ್ದಾಣದಲ್ಲಿ ಸಹಾಯವಾಣಿಯನ್ನು ಸ್ಥಾಪಿಸಲಾಗಿದ್ದು, ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸಂಬಂಧಿಗಳಿಗಾಗಿ ಸಹಾಯವಾಣಿಯನ್ನು ಸಹ ಬಿಡುಗಡೆ ಮಾಡಲಾಗಿದೆ. ಅಲ್ಲದೆ, ಘಟನೆ ನಡೆದ ಮಾರ್ಗವಾಗಿ ಸಂಚರಿಸಬೇಕಾಗಿದ್ದ ಆರು ರೈಲುಗಳನ್ನು ರದ್ದುಗೊಳಿಸಲಾಗಿದ್ದು, ಎರಡು ರೈಲುಗಳನ್ನು ಬೇರೆ ಮಾರ್ಗಗಳಲ್ಲಿ ಸಂಚರಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಕಿರಣ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT