ತಿರುವನಂತಪುರ: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಚಿನ್ನ ನಾಪತ್ತೆ ಪ್ರಕರಣದಲ್ಲಿ ಬಂಧಿತರಾಗಿರುವ ದೇವಾಲಯದ ಪ್ರಧಾನ ಅರ್ಚಕ (ತಂತ್ರಿ) ಕಂಡರಾರು ರಾಜೀವಾರು ಅವರನ್ನು ಅನಾರೋಗ್ಯದ ಕಾರಣ ಶನಿವಾರ ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.

‘ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್ಐಟಿ) ಶುಕ್ರವಾರ ರಾಜೀವಾರು ಅವರನ್ನು ಬಂಧಿಸಿ, ಇಲ್ಲಿನ ವಿಶೇಷ ಜಿಲ್ಲಾ ಉಪ ಬಂದೀಖಾನೆಯಲ್ಲಿ ಇರಿಸಿತ್ತು. ಶನಿವಾರ ಬೆಳಿಗ್ಗೆ ಅರ್ಚಕರು ‘ನನೆಗೆ ಸುಸ್ತಾಗುತ್ತಿದೆ’ ಎಂದು ಹೇಳಿದ ಕಾರಣ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಯಿತು’ ಎಂದು ಬಂದೀಖಾನೆ ಮೂಲಗಳು ತಿಳಿಸಿವೆ.

ಮೊದಲು ಅವರನ್ನು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲಾಯಿತು. ನಂತರ ಅಲ್ಲಿನ ವೈದ್ಯರ ಸೂಚನೆಯ ಮೇರೆಗೆ ಹೆಚ್ಚಿನ ತಪಾಸಣೆಗಾಗಿ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಯಿತು. ಭಾರಿ ಪೊಲೀಸ್ ಬೆಂಗಾಲಿನ ನಡುವೆ ರಾಜೀವಾರು ಅವರು ಸಾರ್ವಜನಿಕ ಆಸ್ಪತ್ರೆಯ ತುರ್ತು ಚಿಕಿತ್ಸಾ ವಾರ್ಡ್ಗೆ ನಡೆದುಕೊಂಡು ಹೋಗುತ್ತಿರುವುದು ಕಂಡುಬಂದಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.