ತಿರುನಂತಪುರ: ಶಬರಿಮಲೆ ಅಯ್ಯಪ್ಪ ದೇಗುಲದ ಚಿನ್ನಗಳವು ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಶುಕ್ರವಾರ ಇನ್ನಿಬ್ಬರನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
.ಶಬರಿಮಲೆ ಚಿನ್ನ ಕಳವು: ಟಿಡಿಬಿ ಮಾಜಿ ಅಧ್ಯಕ್ಷನಿಗೆ ಜಾಮೀನು ನಿರಾಕರಿಸಿದ ಕೇರಳ HC.
ಶಬರಿಮಲೆ ದೇಗುಲದಲ್ಲಿ ಕಲಾಕೃತಿಗಳಿಗೆ ವಿದ್ಯುತ್ ಲೇಪನ ಮಾಡಿದ್ದ ‘ಸ್ಮಾರ್ಟ್ ಕ್ರಿಯೇಷನ್ಸ್’ ಸಿಇಒ ಪಂಕಜ್ ಭಂಡಾರಿ ಹಾಗೂ ಬಳ್ಳಾರಿಯ ಚಿನ್ನದ ಉದ್ಯಮಿ ಗೋವರ್ಧನ ಬಂಧಿತರು.

ಇವರಿಬ್ಬರನ್ನು ವಶಕ್ಕೆ ಪಡೆದು ತಿರುವನಂತಪುರದಲ್ಲಿರುವ ಅಪರಾಧ ವಿಭಾಗದ ಕಚೇರಿಗೆ ಕರೆತಂದು ವಿಚಾರಣೆಗೆ ಒಳಪಡಿಸಲಾಯಿತು. ಅವರ ವಿರುದ್ಧ ಸಾಕ್ಷ್ಯ ಸಿಕ್ಕಿದ ಬಳಿಕ ಬಂಧಿಸಲಾಯಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
.ಚಿನ್ನ ಕಳವು: ಕೇರಳದ ಟಿಡಿಬಿಯ ಮಾಜಿ ಆಡಳಿತಾಧಿಕಾರಿ ಎಸ್.ಶ್ರೀಕುಮಾರ್ ಬಂಧನ.
2019ರಲ್ಲಿ ಪ್ರಕರಣದ ಪ್ರಮುಖ ಆರೋಪಿ ಉಣ್ಣಿಕೃಷ್ಣನ್ ಪೋಟಿ, ದ್ವಾರಪಾಲಕ ಮೂರ್ತಿಗಳು ಹಾಗೂ ಗರ್ಭಗುಡಿಯ ದ್ವಾರಕ್ಕೆ ವಿದ್ಯುತ್ ಲೇಪನಕ್ಕಾಗಿ ಸ್ಮಾರ್ಟ್ ಕ್ರಿಯೇಷನ್ಗೆ ತೆಗೆದಕೊಂಡು ಹೋಗಲಾಗಿದ್ದ. ಆ ವೇಳೆ ಅದರಲ್ಲಿದ್ದ ಚಿನ್ನವನ್ನು ತೆಗೆಯಲಾಗಿದೆ ಎನ್ನುವುದು ಎಸ್ಐಟಿ ತನಿಖೆಯಲ್ಲಿ ಗೊತ್ತಾಗಿದೆ.

ವಿದ್ಯುತ್ ಲೇಪನದ ವೇಳೆ 400 ಗ್ರಾಂಗೂ ಅಧಿಕ ಚಿನ್ನವನ್ನು ತೆಗೆದು ಅದನ್ನು ಗೋವರ್ಧನಗೆ ಹಸ್ತಾಂತರಿಸಲಾಗಿದೆ ಎಂದು ಪೋಟಿ ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ದ್ವಾರಪಾಲಕ ಮೂರ್ತಿಗಳ ಚಿನ್ನಗಳವು ಪ್ರಕರಣದದಲ್ಲಿ ಭಂಡಾರಿ ಹಾಗೂ ಗೋವರ್ಧನ ಆರೋಪಿತರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
.ಶಬರಿಮಲೆ ಚಿನ್ನ ಕಳವು ಪ್ರಕರಣ: ಎಸ್ಐಟಿಯಿಂದ ಟಿಡಿಬಿ ಮಾಜಿ ಅಧ್ಯಕ್ಷನ ವಿಚಾರಣೆ.
ಪ್ರಕರಣದ ದಾಖಲಿಸಿಕೊಂಡ ಬೆನ್ನಲ್ಲೇ ಇವರಿಬ್ಬರನ್ನು ಎಸ್ಐಟಿ ವಿಚಾರಣೆ ನಡೆಸಿತ್ತು. ವಿಚಾರಣೆ ವೇಳೆ ಹೆಚ್ಚಿನ ಸಾಕ್ಷಿಗಳು ಪತ್ತೆಯಾಯಿತು. ಈಗಾಗಲೇ ಎಸ್ಐಟಿ ಗೋವರ್ಧನ ಚಿನ್ನದ ಅಂಗಡಿಯಿಂದ 400 ಗ್ರಾಂ ಚಿನ್ನ ವಶಪಡಿಸಿಕೊಂಡಿದೆ.

ಭಂಡಾರಿ ಹಾಗೂ ಗೋವರ್ಧನ ಪ್ರಕರಣದ ಸಂಬಂಧ ಬಂಧಿತರಾದ 8 ಹಾಗೂ 9ನೇ ಆರೋಪಿಗಳು.

ಬಂಧಿತರನ್ನು ಕೊಲ್ಲಂನ ನ್ಯಾಯಲವೊಂದರಕ್ಕೆ ಹಾಜರು ಪಡಿಸಲಾಗಿದೆ.
.ಶಬರಿಮಲೆ ದೇಗುಲದ ಚಿನ್ನ ಕಳವು; ಸಾಕ್ಷ್ಯ ಸಂಗ್ರಹ ಪೂರ್ಣ:ಕೇರಳಕ್ಕೆ ಮರಳಿದ ಎಸ್ಐಟಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.