ಪತ್ತನಂತಿಟ್ಟ(ಕೇರಳ): ಶಬರಿಮಲೆ ದೇಗುಲದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಸುಧೀಶ್ ಕುಮಾರ್ ಎನ್ನುವವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಸುಧೀಶ್ ಕುಮಾರ್ ಅವರು 1990 ರಿಂದ ಶಬರಿಮಲೆ ದೇಗುಲದೊಂದಿಗೆ ನಂಟಿಟ್ಟುಕೊಂಡಿದ್ದಾರೆ. 2019ರಲ್ಲಿ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ತಿರುವನಂತಪುರದಲ್ಲಿ ಅವರನ್ನು ವಿಚಾರಣೆ ನಡೆಸಿದ ಬಳಿಕ, ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ದ್ವಾರಪಾಲಕ ಮೂರ್ತಿಗಳು ತಾಮ್ರದ ಹೊದಿಕೆ ಹೊಂದಿದೆ ಎಂದು ಅವರು ದೇಗುಲದ ದಾಖಲೆಗಳಲ್ಲಿ ಬರೆದಿದ್ದರು. ಆದರೆ, ಅದು ಚಿನ್ನ ಲೇಪಿತ ಮೂರ್ತಿಗಳಾಗಿತ್ತು. ಈ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿಯಾಗಿರುವ ಉನ್ನಿಕೃಷ್ಣನ್ ಅವರಿಗೆ 2019ರಲ್ಲಿ ವಿಗ್ರಹಗಳಿಗೆ ಚಿನ್ನದ ಲೇಪನ ಮಾಡಲು ಹಸ್ತಾಂತರಿಸುವ ಸಮಯದಲ್ಲೂ ತಾಮ್ರದ ಮೂರ್ತಿಗಳೆಂದೇ ದೇಗುಲದ ದಾಖಲೆಗಳಲ್ಲಿ ದಾಖಲಿಸಲಾಗಿದೆ. ನಂತರ, ಆರೋಪಿಗಳು ಹಳೆಯ ಚಿನ್ನದ ಲೇಪನವನ್ನು ಬೇರ್ಪಡಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಶಬರಿಮಲೆ ಚಿನ್ನ ಕಳವು ಪ್ರಕರಣದಲ್ಲಿ ಸುಧೀಶ್ ಕುಮಾರ್ ಸೇರಿದಂತೆ ಇದುವರೆಗೂ ಮೂವರನ್ನು ಬಂಧಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.