ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡಿನಿಂದ ಶಮರಿಮಲೆಗೆ ತೆರಳುತ್ತಿದ್ದ ವೇಳೆ ಅಪಘಾತ: 8 ಯಾತ್ರಾರ್ಥಿಗಳಿಗೆ ಗಾಯ

Published 21 ಡಿಸೆಂಬರ್ 2023, 8:27 IST
Last Updated 21 ಡಿಸೆಂಬರ್ 2023, 8:27 IST
ಅಕ್ಷರ ಗಾತ್ರ

ಇಡುಕ್ಕಿ (ಕೇರಳ): ಶಬರಿಮಲೆಗೆ ಹೊರಟಿದ್ದ ತಮಿಳುನಾಡಿನ ಯಾತ್ರಾರ್ಥಿಗಳಿದ್ದ ವಾಹನವೊಂದು ಇಂದು ಮುಂಜಾನೆ ಅಪಘಾತಕ್ಕೀಡಾಗಿದ್ದು, 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

‘26 ಯಾತ್ರಾರ್ಥಿಗಳಿದ್ದ ವಾಹನವು ಶಮರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ತೆರಳುತ್ತಿದ್ದು, ಕುಮಲಿ ಸಮೀಪ ಶಂಕರಗಿರಿಯಲ್ಲಿ ಅಪಘಾತ ಸಂಭವಿಸಿದೆ. ತಿರುವಿನಲ್ಲಿ ವಾಹನ ಚಲಾಯಿಸುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಹನವು ಚಹಾ ತೋಟಕ್ಕೆ ಉರುಳಿ ಬಿದ್ದಿದೆ’ ಎಂದಿದ್ದಾರೆ.

‘ನಸುಕಿನಲ್ಲಿ ಮಂಜು ಕವಿದ ವಾತಾವರಣವಿದ್ದು, ಗೂಗಲ್‌ ಮ್ಯಾಪ್‌ ನೋಡಿಕೊಂಡು ವಾಹನ ಚಲಾಯಿಸಿದ್ದೆ ಅಪಘಾತಕ್ಕೆ ಕಾರಣವಾಗಿದೆ’ ಎಂದು ಅವರು ತಿಳಿಸಿದ್ದಾರೆ.

‘ಎಂಟು ಯಾತ್ರಾರ್ಥಿಗಳಿಗೆ ಗಂಭೀರ ಗಾಯಗಳಾಗಿದ್ದರೆ, ಅವರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT