ಸಾಗರ: ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಲೋಪವಾಗುತ್ತಿದ್ದು, ಅದಕ್ಕೆ ಕೇಂದ್ರ ಸರ್ಕಾರವೇ ಕಾರಣ ಎಂದು ಆರೋಪಿಸಿ ಇಲ್ಲಿನ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಉಪವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

‘ಪಶ್ಚಿಮ ಏಷ್ಯಾದಲ್ಲಿ ಯುದ್ಧ ನಡೆಯುತ್ತಿರುವುದರಿಂದ ಬಿಕ್ಕಟ್ಟು ಉಂಟಾಗಿರುವುದು ನಿಜ. ಆದರೆ, ಇದನ್ನೆ ನೆಪವಾಗಿಟ್ಟುಕೊಂಡು ಬಿಜೆಪಿಯೇತರ ಪಕ್ಷ ಅಧಿಕಾರದಲ್ಲಿರುವ ರಾಜ್ಯಗಳಿಗೆ ಸರಿಯಾಗಿ ಅಡುಗೆ ಅನಿಲ ವಿತರಿಸದೆ ಕೇಂದ್ರ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ’ ಎಂದು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ ದೂರಿದರು.

‘ಇರಾನ್–ಇಸ್ರೇಲ್ ನಡುವೆ ಯುದ್ಧ ಆರಂಭವಾದಾಗ ಮೊದಲು ಇಸ್ರೇಲ್ ಪರವಾದ ನಿಲುವು ತಾಳಿದ್ದ ಕೇಂದ್ರ ಸರ್ಕಾರ ನಂತರ ಇರಾನ್ ಪರವಾದ ನಿಲುವು ತಾಳಿದೆ. ರಾಜತಾಂತ್ರಿಕವಾಗಿ ಇಂತಹ ದ್ವಂದ್ವ ನೀತಿಯನ್ನು ಪ್ರಧಾನಿ ನರೇಂದ್ರ ಮೋದಿ ಅನುಸರಿಸುತ್ತಿರುವುದು ಭಾರತಕ್ಕೆ ಮಾರಕವಾಗಿದೆ’ ಎಂದು ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಐ.ಎನ್. ಸುರೇಶ್ ಬಾಬು ಟೀಕಿಸಿದರು.

‘ವಾಣಿಜ್ಯ ಸಿಲಿಂಡರ್ಗಳ ಪೂರೈಕೆ ಸಂಪೂರ್ಣವಾಗಿ ನಿಂತಿರುವುದರಿಂದ ಹೋಟೆಲ್ಗಳು ಬಾಗಿಲು ಮುಚ್ಚುವ ಸ್ಥಿತಿಗೆ ಬಂದಿವೆ. ಬೀದಿ ಬದಿಯಲ್ಲಿ ಆಹಾರದ ತಿನಿಸುಗಳನ್ನು ಮಾರಾಟ ಮಾಡುವ ಅಂಗಡಿಯವರು ಪರದಾಡುವಂತಾಗಿದೆ. ಇದಕ್ಕೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆಯೇ ಕಾರಣ’ ಎಂದು ನಗರ ಯೋಜನಾ ಪ್ರಾಧಿಕಾರದ ಸದಸ್ಯ ಸೋಮಶೇಖರ್ ಲ್ಯಾವಿಗೆರೆ ದೂರಿದರು.

‘ಇರಾನ್–ಇಸ್ರೇಲ್ ನಡುವಿನ ಯುದ್ಧದಿಂದಾಗಿ ಸಂಭವಿಸಿರುವ ಬಿಕ್ಕಟ್ಟುಗಳು ಭಾರತದ ಆರ್ಥಿಕತೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದು, ದೇಶದ ಹಿತಾಸಕ್ತಿಯನ್ನು ಕಾಯುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ’ ಎಂದು ಎಪಿಎಂಸಿ ಮಾಜಿ ಅಧ್ಯಕ್ಷ ಚೇತನ್ ರಾಜ್ ಕಣ್ಣೂರು ಆರೋಪಿಸಿದರು.

ಕಾಂಗ್ರೆಸ್ನ ಪ್ರಮುಖರಾದ ಗಣಪತಿ ಮಂಡಗಳಲೆ, ಸದ್ದಾಂ ದೊಡ್ಮನೆ, ಎಲ್. ಚಂದ್ರಪ್ಪ, ಮಧುಮಾಲತಿ, ಗಿರೀಶ್ ಕೋವಿ, ಡಿ.ದಿನೇಶ್, ಆನಂದ ಭೀಮನೇರಿ, ವಿಲ್ಸನ್ ಗೊನ್ಸಾಲ್ವಿಸ್, ಮೈಕೆಲ್ ಡಿಸೋಜ, ಸರಸ್ವತಿ ನಾಗರಾಜ್, ಎನ್. ಲಲಿತಮ್ಮ, ಎನ್. ಉಷಾ, ಸೈಯದ್ ಜಾಕೀರ್, ರವಿಕುಮಾರ್, ಪ್ರಭಾವತಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-42-1951319550

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.