ಸೇಲಂ(ತಮಿಳುನಾಡು): ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸ್ಥಾಪಕ, ನಟ ವಿಜಯ್ ನೇತೃತ್ವದಲ್ಲಿ ಶುಕ್ರವಾರ ಇಲ್ಲಿ ನಡೆದ ರ್ಯಾಲಿಯಲ್ಲಿ ಭಾಗವಹಿಸಿದ್ದ 37 ವರ್ಷದ ವ್ಯಕ್ತಿಯೊಬ್ಬರು ಕುಸಿದು ಬಿದ್ದು, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಮೃತಪಟ್ಟಿದ್ದಾರೆ.

ಮೃತರನ್ನು ಸೂರಜ್ ಎಂದು ಗುರುತಿಸಲಾಗಿದೆ. ಮಹಾರಾಷ್ಟ್ರ ಮೂಲದ ನಿವಾಸಿಯಾಗಿದ್ದ ಇವರು ರ್ಯಾಲಿಯಲ್ಲಿ ಭಾಗವಹಿಸಿದ್ದ ವೇಳೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಗೆ ಕರೆತರುವ ವೇಳೆಗಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೂರಜ್ ಕೆಲ ತಿಂಗಳ ಹಿಂದೆ ಆ್ಯಂಜಿಯೊಪ್ಲಾಸ್ಟಿಗೆ ಒಳಗಾಗಿದ್ದರು.

‘ಸೂರಜ್ ಅವರು ನಟ ವಿಜಯ್ ಅವರನ್ನು ನೋಡಲು ರ್ಯಾಲಿಗೆ ಹೋಗಿದ್ದರು. ಅಲ್ಲಿಗೆ ಬಂದ ಕೆಲ ಹೊತ್ತಿನಲ್ಲೇ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ಆ್ಯಂಬುಲೆನ್ಸ್ ಮೂಲಕ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಕರೆತರುವ ಮುನ್ನವೇ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.