ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೀಟು ಹಂಚಿಕೆ ಅಂತಿಮಗೊಳ್ಳುವವರೆಗೆ ಕಾಂಗ್ರೆಸ್ ಯಾತ್ರೆಯಲ್ಲಿ ಭಾಗವಹಿಸಲ್ಲ:ಅಖಿಲೇಶ್

Published 19 ಫೆಬ್ರುವರಿ 2024, 9:09 IST
Last Updated 19 ಫೆಬ್ರುವರಿ 2024, 9:09 IST
ಅಕ್ಷರ ಗಾತ್ರ

ಲಖನೌ: ‘ಉತ್ತರಪ್ರದೇಶದಲ್ಲಿ ಕಾಂಗ್ರೆಸ್‌ಗೆ 17 ಲೋಕಸಭಾ ಕ್ಷೇತ್ರಗಳನ್ನು ಬಿಟ್ಟುಕೊಡಲು ಸಿದ್ಧರಿದ್ದೇವೆ. ಇದಕ್ಕೆ ಒಪ್ಪಿದರಷ್ಟೆ ರಾಯ್‌ಬರೇಲಿಯಲ್ಲಿ ನಡೆಯಲಿರುವ ರಾಹುಲ್‌ ಗಾಂಧಿ ನೇತೃತ್ವದ ಭಾರತ್‌ ಜೋಡೋ ಯಾತ್ರೆಯಲ್ಲಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಭಾಗವಹಿಸುತ್ತಾರೆ’ ಎಂದು ಸಮಾಜವಾದಿ ಪಕ್ಷ ಸೋಮವಾರ ತಿಳಿಸಿದೆ.

‘ಕಾಂಗ್ರೆಸ್‌ಗೆ ಕೊನೆಯ ಅವಕಾಶವನ್ನು ನೀಡುತ್ತಿದ್ದೇವೆ. ಅಖಿಲೇಶ್‌ ಯಾದವ್‌ ಅವರು ಯಾತ್ರೆಯಲ್ಲಿ ಭಾಗಿಯಾಗುವುದು ಕಾಂಗ್ರೆಸ್‌ನ ಒಪ್ಪಿಗೆಯ ಮೇಲೆ ನಿರ್ಧರಿತವಾಗಲಿದೆ’ ಎಂದು ಸಮಾಜವಾದಿ ಪಕ್ಷದ ಮುಖ್ಯ ವಕ್ತಾರ ರಾಜೇಂದ್ರ ಚೌಧರಿ ತಿಳಿಸಿದರು.

ಸೋಮವಾರ ಅಮೇಥಿಯಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆಯು ಸಾಗಿದ್ದು, ಮಂಗಳವಾರ ರಾಯ್‌ಬರೇಲಿಯನ್ನು ತಲುಪಲಿದೆ. ಯಾತ್ರೆಯಲ್ಲಿ ಭಾಗಿಯಾಗುವುದಾಗಿ ಈ ಹಿಂದೆ ಅಖಿಲೇಶ್‌ ಯಾದವ್‌ ತಿಳಿಸಿದ್ದರು. ಇದೀಗ ಸೀಟು ಹಂಚಿಕೆ ತೀರ್ಮಾನವಾದರೆ ಮಾತ್ರ ಯಾತ್ರೆಯಲ್ಲಿ ಭಾಗಿಯಾಗುವುದಾಗಿ ಷರತ್ತು ವಿಧಿಸಿದ್ದಾರೆ.

ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಸಮಾಜವಾದಿ ಪಕ್ಷವು ಆರಂಭದಲ್ಲಿ ಕಾಂಗ್ರೆಸ್‌ಗೆ 11 ಸ್ಥಾನಗಳನ್ನು ಬಿಟ್ಟುಕೊಡುವುದಾಗಿ ತಿಳಿಸಿತ್ತು. ಆದರೆ ಕಾಂಗ್ರೆಸ್‌ ಹೆಚ್ಚು ಸ್ಥಾನಗಳನ್ನು ನೀಡುವಂತೆ ಪಟ್ಟುಹಿಡಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT