ಸಂಭಲ್: ನವೆಂಬರ್ 24ರ ಹಿಂಸಾಚಾರ ಸಂಬಂಧ ಹೇಳಿಕೆ ದಾಖಲಿಸಿಕೊಳ್ಳಲು ಇಲ್ಲಿನ ಶಾಹಿ ಜಮಾ ಮಸೀದಿಯ ಅಧ್ಯಕ್ಷ ಝಫರ್ ಅಲಿಯವರನ್ನು ಸ್ಥಳೀಯ ಪೊಲೀಸ್ನ ವಿಶೇಷ ತನಿಖಾ ತಂಡ ವಶಕ್ಕೆ ಪಡೆದಿದೆ.

ಮೊಘಲರ ಕಾಲದ ಈ ಮಸೀದಿಯನ್ನು ಹಳೆಯ ಹಿಂದೂ ದೇಗುಲವನ್ನು ಒಡೆದು ನಿರ್ಮಿಸಲಾಗಿದೆ ಎನ್ನುವ ವಾದ ಇದೆ.
.ಸಂಭಲ್ ಕಟ್ಟಡ ಧ್ವಂಸ: ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ .
ಮಸೀದಿಯ ಅಧ್ಯಕ್ಷರನ್ನು ಬಂಧಿಸಲಾಗಿದೆಯೇ ಎಂದು ಪಿಟಿಐ ಕೇಳಿದ ಪ್ರಶ್ನೆಗೆ, ‘ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲು ಎಸ್ಐಟಿ ವಶಕ್ಕೆ ಪಡೆದಿದೆ’ ಎಂದು ಸಂಭಲ್ ಕೊತ್ವಾಲಿ ಉಸ್ತುವಾರಿ ಅನುಜ್ ಕುಮಾರ್ ತೋಮರ್ ಹೇಳಿದ್ದಾರೆ.

ನವೆಂಬರ್ 24ರ ಹಿಂಸಾಚಾರಕ್ಕೆ ಸಂಬಂಧಿಸಿಯೇ ಅವರನ್ನು ವಶಕ್ಕೆ ಪಡೆಯಲಾಗಿದೆಯೇ ಎನ್ನುವ ಪ್ರಶ್ನೆಗೆ, ಅದರ ಸಂಬಂಧ ವಿಚಾರಣೆ ನಡೆಸಲು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದಾರೆ.
.ಸಂಭಲ್ ಹಿಂಸಾಚಾರ: ಎಸ್ಪಿ ಸಂಸದ ಝಿಯಾವುರ್ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತಡೆ.
ಮಸೀದಿಯನ್ನು ಸಮೀಕ್ಷೆ ನಡೆಸಬೇಕು ಎಂದು ಕೋರ್ಟ್ ಆದೇಶ ಮಾಡಿದ ಬಳಿಕ ಕಳೆದ ವರ್ಷ ನವೆಂಬರ್ 24ರಂದು ಸಂಭಲ್ನಲ್ಲಿ ಹಿಂಸಾಚಾರ ನಡೆದಿತ್ತು. ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದರು. ಪೊಲೀಸ್ ಸಿಬ್ಬಂದಿ ಸೇರಿ ಹಲವರು ಗಾಯಗೊಂಡಿದ್ದಾರೆ.
.ರಾಹುಲ್ ಗಾಂಧಿಗೆ ಸಂಭಲ್ ಪ್ರವೇಶ ನಿರಾಕರಣೆ: ಮಲ್ಲಿಕಾರ್ಜುನ ಖರ್ಗೆ ಕಿಡಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.