ಪಟ್ಟಾ: ಬಿಹಾರದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಸಾಮ್ರಾಟ್ ಚೌಧರಿ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಬುಧವಾರ ಬೆಳಗ್ಗೆ ಲೋಕಭವನದಲ್ಲಿ ಸಾಮ್ರಾಟ್ ಚೌಧರಿ ಅವರಿಗೆ ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಸಯ್ಯದ್ ಅತಾ ಹಸನೈನ್ ಅವರು ಪ್ರಮಾಣ ವಚನ ಬೋಧಿಸಿದರು.

ಚೌಧರಿ ಅವರ ಜೊತೆಗೆ ಕೆಲ ಸಚಿವರು ಕೂಡ ಪ್ರತಿಜ್ಞಾವಿಧಿ ಸ್ವೀಕರಿಸಿದರು.

ರಾಜ್ಯಸಭೆಗೆ ಆಯ್ಕೆಯಾಗಿರುವ ಜೆಡಿಯು ವರಿಷ್ಠ ನಿತೀಶ್ ಕುಮಾರ್ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದರು. ಇದರೊಂದಿಗೆ ಬಿಹಾರದಲ್ಲಿ ಮೊಟ್ಟಮೊದಲ ಬಾರಿಗೆ ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ.

ಚೌಧರಿ ಅವರು ಆರ್ಜೆಡಿ ಸೇರುವ ಮೂಲಕ ತಮ್ಮ ರಾಜಕೀಯ ಜೀವನ ಆರಂಭಿಸಿದರು. ಬಳಿಕ ಜೆಡಿಯು ಸೇರಿ ನಿತೀಶ್ ಕುಮಾರ್ ಅವರಿಗೆ ನಿಷ್ಠರಾದರು. ನಂತರ ಕೇಂದ್ರ ಸಚಿವರೂ ಆಗಿರುವ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ನೇತೃತ್ವದ ಹಿಂದೂಸ್ತಾನ ಅವಾಮ್ ಮೋರ್ಚಾ(ಎಚ್ಎಎಂ) ಸೇರಿದರು.

2018ರಲ್ಲಿ ಬಿಜೆಪಿ ಸೇರಿದ ಅವರು, 2023ರಲ್ಲಿ ಬಿಹಾರ ಘಟಕದ ಅಧ್ಯಕ್ಷರಾದರು. 2024ರಲ್ಲಿ ಉಪ ಮುಖ್ಯಮಂತ್ರಿ ಹುದ್ದೆಗೇರಿದರು.

1999ರಲ್ಲಿ ಮುಖ್ಯಮಂತ್ರಿ ರಾಬ್ಡಿ ದೇವಿ ಅವರ ಸಂಪುಟದಲ್ಲಿ ಸಾಮ್ರಾಟ್ ಸಚಿವರಾಗಿದ್ದರು. ಅರ್ಹ ವಯಸ್ಸು ಇಲ್ಲ ಎಂಬ ಆರೋಪ ಕೇಳಿ ಬಂದ ಕಾರಣ ಅವರನ್ನು ತೆಗೆದು ಹಾಕಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.