ನವದೆಹಲಿ: ಇತ್ತೀಚಿನ ದಿನಗಳಲ್ಲಿ ಇಂಡಿಯಾ ಮೈತ್ರಿಕೂಟವು ಸನಾತನ ಧರ್ಮವನ್ನು ನಿಂದಿಸುವುದು ಹಾಗೂ ಪತ್ರಿಕಾ ಮಾಧ್ಯಮಗಳನ್ನು ಬೆದರಿಸುವ ಕೆಲಸದಲ್ಲಿಯೇ ತೊಡಗಿದೆ ಎಂದು ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆ.ಪಿ ನಡ್ಡಾ ಆರೋಪಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಇಂಡಿಯಾ ಮೈತ್ರಿಕೂಟವು ಸನಾತನ ಧರ್ಮದ ವಿರುದ್ಧ ಹೇಳಿಕೆಗಳನ್ನು ನೀಡುವುದು ಹಾಗೂ ಮಾಧ್ಯಮ ಪ್ರತಿನಿಧಿಗಳನ್ನು ಗುರಿಯಾಗಿಸಿಕೊಂಡು ಅವರ ವಿರುದ್ಧ ಎಫ್‌ಐಆರ್ ದಾಖಲಿಸುವುದು, ಬೆದರಿಸುವ ಕಾರ್ಯದಲ್ಲಿ ತೊಡಗಿದೆ. ಈ ಮೂಲಕ ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಉಂಟಾಗಿದ್ದ ವಾತಾವರಣದ ನೈಜ ಚಿತ್ರಣವು ಇನ್ನೂ ಈ ಪಕ್ಷಗಳಲ್ಲಿ ಅಸ್ಥಿತ್ವದಲ್ಲಿದೆ ಎಂದು ಕಿಡಿಕಾರಿದ್ದಾರೆ.
ಇಂಡಿಯಾ ಮೈತ್ರಿಕೂಟವು ಈ ರೀತಿಯ ನಡವಳಿಕೆಗಳನ್ನು ನಿಲ್ಲಿಸಬೇಕು. ದೇಶದ ಅಭಿವೃದ್ಧಿ ಮತ್ತು ಜನರಿಗೆ ಸೇವೆ ಸಲ್ಲಿಸುವುದರ ಬಗ್ಗೆ ಗಮನಹರಿಸಬೇಕು ಎಂದು ನಡ್ಡಾ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.