ನವದೆಹಲಿ: ಸರ್ಕಾರಿ ನೌಕರರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಲು ಸಂಬಂಧಪಟ್ಟ ಇಲಾಖೆಯ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಸುಪ್ರೀಂ ಕೋರ್ಟ್ ಎಂದು ಹೇಳಿದೆ.
ನೌಕರ ಎಸಗಿದ ಕೃತ್ಯದ ಬಗ್ಗೆ ಪ್ರಕರಣ ದಾಖಲಿಸಲು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988ರ ಸೆಕ್ಷನ್ 19ರ ಅಡಿ ಇಲಾಖೆಯ ಅನುಮತಿ ಪಡೆಯಬೇಕಿದೆ. ಆದರೆ, ನೌಕರನ ವಿರುದ್ಧ ಐಪಿಸಿ ಸೆಕ್ಷನ್‌ನಡಿ ದಾಖಲಾಗುವ ಪ್ರಕರಣಗಳಲ್ಲಿ ಈ ಮಾನದಂಡ ಪಾಲಿಸುವ ಅಗತ್ಯವಿಲ್ಲ ಎಂದು ಬಿ.ಆರ್. ಗವಾಯಿ ಮತ್ತು ಜೆ.ಬಿ. ಪಾರ್ದಿವಾಲಾ ಅವರಿದ್ದ ನ್ಯಾಯಪೀಠ ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.