ಗುರುವಾರ, 10 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಲಡ್ಡು ಪ್ರಸಾದದ ಪಾವಿತ್ರ್ಯತೆಯನ್ನು ಪುನರ್ ಸ್ಥಾಪಿಸಲಾಗಿದೆ: ಟಿಟಿಡಿ

ತಿರುಪತಿ ದೇವಸ್ಥಾನದ ಲಡ್ಡು ಪ್ರಸಾದದ ಪಾವಿತ್ರ್ಯತೆಯನ್ನು ಪುನರ್ ಸ್ಥಾಪಿಸಲಾಗಿದ್ದು ಪ್ರಸಾದ ಇದೀಗ ಕಳಂಕರಹಿತ ಎಂದು ತಿರುಮಲ ತಿರುಪತಿ ದೇವಸ್ಥಾನದ ಸಮಿತಿ (ಟಿಟಿಡಿ) ಹೇಳಿದೆ.
Published : 21 ಸೆಪ್ಟೆಂಬರ್ 2024, 5:29 IST
Last Updated : 21 ಸೆಪ್ಟೆಂಬರ್ 2024, 5:29 IST
ಫಾಲೋ ಮಾಡಿ
Comments

ಬೆಂಗಳೂರು: ತಿರುಪತಿ ದೇವಸ್ಥಾನದ ಲಡ್ಡು ಪ್ರಸಾದದ ಪಾವಿತ್ರ್ಯತೆಯನ್ನು ಪುನರ್ ಸ್ಥಾಪಿಸಲಾಗಿದ್ದು ಪ್ರಸಾದ ಇದೀಗ ಕಳಂಕರಹಿತ ಎಂದು ತಿರುಮಲ ತಿರುಪತಿ ದೇವಸ್ಥಾನದ ಸಮಿತಿ (ಟಿಟಿಡಿ) ಹೇಳಿದೆ.

ಈ ಕುರಿರು ಟಿಟಿಡಿ ಶುಕ್ರವಾರ ಎಕ್ಸ್ ತಾಣದಲ್ಲಿ ಪೋಸ್ಟ್ ಮಾಡಿದೆ.

ಶ್ರೀವಾರಿಯ ಲಡ್ಡುವಿನ ದೈವತ್ವ ಹಾಗೂ ಪಾವಿತ್ರ್ಯತೆ ಇದೀಗ ಕಳಂಕರಹಿತವಾಗಿದೆ. ಭಕ್ತರಿಗೆ ಸಾಕಾಗುವಷ್ಟು ಹಾಗೂ ಪಾವಿತ್ರ್ಯತೆ ಇರುವ ಪ್ರಸಾದವನ್ನು ಒದಗಿಸುವಲ್ಲಿ ಟಿಟಿಡಿ ಬದ್ಧವಾಗಿದೆ ಎಂದು ಹೇಳಿದೆ.

ತಿರುಪತಿಯ ಪ್ರಸಾದ ಲಾಡು ತಯಾರಿಕೆಯಲ್ಲಿ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬಿನ ಅಂಶ ಬಳಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ. ಈ ಬಗ್ಗೆ ವ್ಯಾಪಕ ವಿವಾದವಾಗಿದೆ.

ದೇವಸ್ಥಾನದ ಪಾವಿತ್ರ್ಯ, ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂಬ ಆರೋಪ ವಿವಿಧೆಡೆ ಕೇಳಿಬಂದಿದೆ.

‘ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ರಾಜಕೀಯ ಲಾಭಕ್ಕಾಗಿ ದೇವರನ್ನೂ ಬಳಸಿಕೊಳ್ಳುವ ಮಟ್ಟಕ್ಕೆ ಇಳಿದಿದ್ದಾರೆ. ಆ ಮೂಲಕ ಅವರು ಕೋಟ್ಯಂತರ ಭಕ್ತರ ಭಾವನೆಗಳ ಜತೆ ಆಟವಾಡುತ್ತಿದ್ದಾರೆ. ಇದು ಸರಿಯಲ್ಲ’ ಎಂದು ವೈಎಸ್‌ಆರ್‌ಸಿಪಿ ಮುಖ್ಯಸ್ಥ ವೈ.ಎಸ್‌.ಜಗನ್‌ಮೋಹನ್‌ ರೆಡ್ಡಿ ತಿರುಗೇಟು ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT