ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂದೇಶ್‌ಖಾಲಿ: ಶಾಜಹಾನ್ ಆಪ್ತ ಉದ್ಯಮಿಗಳ ಮನೆಗಳಲ್ಲಿ ಇ.ಡಿ ಶೋಧ

Published 14 ಮಾರ್ಚ್ 2024, 13:05 IST
Last Updated 14 ಮಾರ್ಚ್ 2024, 13:05 IST
ಅಕ್ಷರ ಗಾತ್ರ

ಕೋಲ್ಕತ್ತ: ಟಿಎಂಸಿಯಿಂದ ಅಮಾನತುಗೊಂಡಿರುವ ಮುಖಂಡ ಶಾಜಹಾನ್‌ ಶೇಖ್‌ ಅವರ ಇಬ್ಬರು ಆಪ್ತ ಉದ್ಯಮಿಗಳ ಸಂದೇಶ್‌ಖಾಲಿಯಲ್ಲಿರುವ ಮನೆಗಳಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಗುರುವಾರ ಶೋಧ ನಡೆಸಿದರು.

ಪಡಿತರ ಹಗರಣಕ್ಕೆ ಸಂಬಂಧಿಸಿ ಈ ಶೋಧ ಕಾರ್ಯ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದರು. ಉದ್ಯಮಿಯೊಬ್ಬರಿಗೆ ಸೇರಿದ ಮಾರುಕಟ್ಟೆಯಲ್ಲೂ ಶೋಧ ನಡೆದಿದೆ.

ಪಡಿತರ ವಿತರಣೆಗೆ ಮೀಸಲಿರಿಸಿದ್ದ ಹಣವನ್ನು ಮೀನು ವ್ಯಾಪಾರಕ್ಕೆ ಬಳಸಲು ಈ ಉದ್ಯಮಿಗಳು ಶೇಖ್‌ ಅವರಿಗೆ ಸಹಾಯ ಮಾಡಿದ್ದರು ಎಂದು ಅಧಿಕಾರಿಗಳು ಹೇಳಿದರು.

ಈ ಪ್ರಕರಣಕ್ಕೆ ಸಂಬಂಧಿಸಿ ಶೋಧ ಕಾರ್ಯಕ್ಕೆ ತೆರಳಿದ್ದ ಇ.ಡಿ ಅಧಿಕಾರಿಗಳ ಮೇಲೆ ಜನವರಿ 5ರಂದು ನಡೆದಿದ್ದ ದಾಳಿ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿದೆ. ಶೇಖ್ ಅವರು ಸದ್ಯ ಸಿಬಿಐ ವಶದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT