ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಂದೇಶ್‌ಖಾಲಿ: ಮಮತಾ ಮಧ್ಯಪ್ರವೇಶಿಸಲಿ– ರಾಜ್ಯಪಾಲ

Published 2 ಜೂನ್ 2024, 16:33 IST
Last Updated 2 ಜೂನ್ 2024, 16:33 IST
ಅಕ್ಷರ ಗಾತ್ರ

ಕೋಲ್ಕತ್ತ: ಸಂದೇಶ್‌ಖಾಲಿಯಲ್ಲಿ ನಡೆದ ಹಿಂಸಾಚಾರ ಘಟನೆಗೆ ಕಳವಳ ವ್ಯಕ್ತಪಡಿಸಿದ ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಅನಂದ ಬೋಸ್ ಅವರು, ಪ್ರದೇಶದಲ್ಲಿ ಶಾಂತಿ ಮರುಸ್ಥಾಪಿಸಲು ಮಧ್ಯ ಪ್ರವೇಶಿಸುವಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಲ್ಲಿ ಕೇಳಿಕೊಂಡಿದ್ದಾರೆ.

ಮತದಾನದ ಮರುದಿನ ಸಂದೇಶ್‌ಖಾಲಿಯಲ್ಲಿ ನಡೆದ ಹಿಂಸಾಚಾರ ಘಟನೆಗಳಲ್ಲಿ ಭಾಗಿಯಾಗಿರುವವರ ವಿರುದ್ಧ ತೆಗೆದುಕೊಂಡ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ಸೂಚಿಸಿ ಮಮತಾ ಅವರಿಗೆ ಪತ್ರ ಬರೆದಿರುವುದಾಗಿ ಅವರು ಭಾನುವಾರ ಹೇಳಿದ್ದಾರೆ.

‘ಸಂದೇಶ್‌ಖಾಲಿಯ ಈಗಿನ ಪರಿಸ್ಥಿತಿ ಬಗ್ಗೆ ಕಳವಳಗೊಂಡಿದ್ದೇನೆ. ಮತದಾನ ಕೊನೆಗೊಂಡ ಕೆಲವೇ ಗಂಟೆಗಳಲ್ಲಿ ಅಲ್ಲಿ ಮಹಿಳೆಯರ ಮೇಲೆ ಹಲ್ಲೆ ನಡೆದಿರುವುದು ನನ್ನ ಗಮನಕ್ಕೆ ಬಂದಿದೆ’ ಎಂದಿದ್ದಾರೆ.

‘ಇಂತಹ ದಾಳಿ ಮುಂದುವರಿದರೆ ಮತ್ತು ನಿವಾಸಿಗಳಿಗೆ ಕಿರುಕುಳ ನೀಡಿದರೆ, ನಾನು ರಾಜಭವನದ ಬಾಗಿಲನ್ನು ಅವರಿಗಾಗಿ ತೆರೆದಿಡುತ್ತೇನೆ. ಅವರಿಗೆ ರಾಜಭವನದಲ್ಲಿ ಸುರಕ್ಷಿತ ಆಶ್ರಯ ಕಲ್ಪಿಸಲಾಗುವುದು’ ಎಂದು ಹೇಳಿದ್ದಾರೆ.

ಮತದಾನ ದಿನದಂದು ಸಂದೇಶ್‌ಖಾಲಿಯಲ್ಲಿ ಪೊಲೀಸರ ಮೇಲೆ ನಡೆದ ದಾಳಿ ನಡೆದಿತ್ತು. ಆ ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರನ್ನು ವಶಕ್ಕೆ ಪಡೆಯಲು ‌ತೆರಳಿದ್ದ ಪೊಲೀಸರು ಮತ್ತು ಮಹಿ‌ಳೆಯರ ನಡುವೆ ಭಾನುವಾರ ಘರ್ಷಣೆ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT