ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು: ಅರುಣ್‌ ಹಲ್ದಾರ್‌

ಸಂದೇಶ್‌ಖಾಲಿ ಹಿಂಸಾಚಾರ: ವರದಿ ಸಲ್ಲಿಸಿದ ಎನ್‌ಸಿಎಸ್‌ಸಿ
Published 16 ಫೆಬ್ರುವರಿ 2024, 12:44 IST
Last Updated 16 ಫೆಬ್ರುವರಿ 2024, 12:44 IST
ಅಕ್ಷರ ಗಾತ್ರ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕೆಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿರುವ ವರದಿಯಲ್ಲಿ ಶಿಫಾರಸು ಮಾಡಲಾಗಿದೆ ಎಂದು ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದ (ಎನ್‌ಸಿಎಸ್‌ಸಿ) ಅಧ್ಯಕ್ಷ ಅರುಣ್‌ ಹಲ್ದಾರ್‌ ಶುಕ್ರವಾರ ತಿಳಿಸಿದರು.

ಸಂದೇಶ್‌ಖಾಲಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರಪತಿಗೆ ವರದಿ ಸಲ್ಲಿಸಿದ ಬಳಿಕ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ಅಪರಾಧಿಗಳು ಸರ್ಕಾರದ ಜೊತೆಗೆ ಕೈಜೋಡಿಸಿದ್ದಾರೆ ಎಂದು ಆರೋಪಿಸಿದರು.

ವರದಿಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಮುರ್ಮು ಅವರು ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಕಾನೂನು ಮತ್ತು ಸುವ್ಯವಸ್ಥೆಯ ನೆಪ ಹೇಳಿ, ಹಿಂಸಾಚಾರ ನಡೆದಿರುವ ಸ್ಥಳಕ್ಕೆ ಎನ್‌ಸಿಎಸ್‌ಸಿಯ ನಿಯೋಗ ತೆರಳದಂತೆ ತಡೆಯಲು ರಾಜ್ಯ ಸರ್ಕಾರವು ಯತ್ನಿಸಿತ್ತು ಎಂದು ಆರೋಪಿಸಿರುವ ಅವರು, ಹಿಂಸಾಚಾರದಿಂದಾಗಿ ಪರಿಶಿಷ್ಟ ಜಾತಿಯವರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ವಿವರಿಸಿದರು.

ತುರ್ತು ಕ್ರಮಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್‌ ನೀಡಲಾಗಿದೆ ಎಂದಿದ್ದಾರೆ. ಎನ್‌ಸಿಎಸ್‌ಸಿ ನಿಯೋಗವು ಗುರುವಾರ ಸಂದೇಶ್‌ಖಾಲಿಗೆ ಭೇಟಿ ನೀಡಿತ್ತು.

ಟಿಎಂಸಿ ನಾಯಕ ಶಹಜಹಾನ್‌ ಶೇಖ್‌ ಹಾಗೂ ಅವರ ಬೆಂಬಲಿಗರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಮತ್ತು ತಮ್ಮ ಭೂಮಿಯನ್ನು ಕಸಿದುಕೊಂಡಿದ್ದಾರೆ ಎಂದು ಅಲ್ಲಿನ ಮಹಿಳೆಯರು ನಿಯೋಗದ ಮುಂದೆ ಅಳಲು ತೋಡಿಕೊಂಡಿದ್ದರು.

ಶೇಖ್‌ ಅವರನ್ನು ಕೂಡಲೇ ಬಂಧಿಸಬೇಕು ಎಂದೂ ಒತ್ತಾಯಿಸಿದ್ದರು. ಶೇಖ್‌ ಅವರು ಜನವರಿ 5ರಿಂದ ತಲೆಮರೆಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT