ಮುಂಬೈ: ‘ಸಿದ್ದರಾಮಯ್ಯ ಅವರು ಯಾವುದೇ ಗೊಂದಲಕ್ಕೆ ಆಸ್ಪದ ಕೊಡದೇ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದಿದ್ದಾರೆ. ಇಂಥ ನಡೆಯಿಂದಾಗಿ ಕರ್ನಾಟಕದ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗೆಗಿನ ನನ್ನ ಗೌರವ ಮತ್ತಷ್ಟು ಹೆಚ್ಚಿದೆ’ ಎಂದು ಶಿವಸೇನಾ(ಯುಬಿಟಿ) ರಾಜ್ಯಸಭಾ ಸಂಸದ ಸಂಜಯ್ ರಾವುತ್ ಹೇಳಿದ್ದಾರೆ.

‘ಭಾರತದ ಸಮಕಾಲೀನ ರಾಜಕಾರಣದಲ್ಲಿ ಇಂತಹ ರಾಜಕೀಯ ಶಿಸ್ತು ಹಾಗೂ ಸಂಯಮ ಅಪರೂಪವೇ ಸರಿ. ಸಿದ್ದರಾಮಯ್ಯ ನಿಜವಾದ ಜನನಾಯಕ’ ಎಂದೂ ಅವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕರ್ನಾಟಕದಲ್ಲಿನ ನಾಯಕತ್ವ ಬದಲಾವಣೆಯು ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ. ಆದರೆ, ಈ ವಿಚಾರದಲ್ಲಿ ಸಿದ್ದರಾಮಯ್ಯ ಅವರು ಪಕ್ಷದ ನಿರ್ಧಾರವನ್ನು ಗೌರವಿಸಿ, ಪದತ್ಯಾಗ ಮಾಡಿದ್ದಾರೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.