ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಎಎಪಿ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಸಂಜಯ್‌ ಸಿಂಗ್‌ ನೇಮಕ

ರಾಜ್ಯಸಭೆಯಲ್ಲಿ ಪಕ್ಷದ ನಾಯಕರಾಗಿಯೂ ಮರು ಆಯ್ಕೆ
Published 5 ಜುಲೈ 2024, 14:38 IST
Last Updated 5 ಜುಲೈ 2024, 14:38 IST
ಅಕ್ಷರ ಗಾತ್ರ

ನವದೆಹಲಿ: ಆಮ್‌ ಆದ್ಮಿ ಪಕ್ಷದ ರಾಜ್ಯಸಭೆ ಸದಸ್ಯ ಸಂಜಯ್‌ ಸಿಂಗ್‌ ಅವರನ್ನು ಎಎಪಿ ಸಂಸದೀಯ ಪಕ್ಷದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಅಲ್ಲದೆ ರಾಜ್ಯಸಭೆಯಲ್ಲಿ ಪಕ್ಷದ ನಾಯಕರನ್ನಾಗಿ ಅವರನ್ನೇ ಆಯ್ಕೆ ಮಾಡಲಾಗಿದೆ. 

‘ರಸ್ತೆಯಿಂದ ಹಿಡಿದು ಸಂಸತ್ತಿನವರೆಗೆ ಧ್ವನಿ ಎತ್ತಲು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ನನಗೆ ಯಾವಾಗಲೂ ಅವಕಾಶ ನೀಡಿದ್ದಾರೆ. ಸಂಸದೀಯ ಪಕ್ಷದ ಮುಖ್ಯಸ್ಥನಾಗಿ ಸಮರ್ಪಣಾ ಭಾವದಿಂದ ನನ್ನ ಕರ್ತವ್ಯಗಳನ್ನು ನಿಭಾಯಿಸುತ್ತೇನೆ. ಕೇಜ್ರಿವಾಲ್‌ ಹಾಗೂ ಪಕ್ಷಕ್ಕೆ ನಾನು ಕೃತಜ್ಞನಾಗಿದ್ದೇನೆ’ ಎಂದು ಸಂಜಯ್‌ ಅವರು ‘ಎಕ್ಸ್‌’ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ. 

ರಾಜ್ಯಸಭೆಯಲ್ಲಿ 10 ಸದಸ್ಯರನ್ನು ಹೊಂದಿರುವ ಎಎಪಿ ನಾಲ್ಕನೇ ಅತಿದೊಡ್ಡ ಪಕ್ಷವಾಗಿದೆ. ಲೋಕಸಭೆಯಲ್ಲಿ ಮೂವರು ಸದಸ್ಯರನ್ನು ಹೊಂದಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT