ಸೋಮವಾರ, 11 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಂಕರ ಕಣ್ಣಿನ ಆಸ್ಪತ್ರೆ ಸಂಸ್ಥಾಪಕ ಡಾ.ಎಸ್.ಎಸ್.ಬದ್ರಿನಾಥ್ ನಿಧನ

Published 21 ನವೆಂಬರ್ 2023, 9:50 IST
Last Updated 21 ನವೆಂಬರ್ 2023, 9:50 IST
ಅಕ್ಷರ ಗಾತ್ರ

ಚೆನ್ನೈ: ಶಂಕರ ಕಣ್ಣಿನ ಆಸ್ಪತ್ರೆ ಸಂಸ್ಥಾಪಕ ಡಾ.ಎಸ್.ಎಸ್.ಬದ್ರಿನಾಥ್ ಮಂಗಳವಾರ ನಿಧನರಾದರು. ಅವರಿಗೆ 83 ವರ್ಷ ವಯಸ್ಸಾಗಿತ್ತು. 

ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ತಮ್ಮ ನಿವಾಸದಲ್ಲಿ ನಿಧನರಾದರು ಎಂದು ಶಂಕರ ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಲಕ್ಷಾಂತರ ಜನರಿಗೆ ಕೈಗೆಟಕುವ ದರದಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆ ನೀಡುತ್ತಿದ್ದರು. ಕಣ್ಣಿನ ಶಸ್ತ್ರಚಿಕಿತ್ಸಕರಾಗಿದ್ದ ಅವರು ಶಂಕರ ನೇತ್ರಾಲಯ ಸ್ಥಾಪನೆ ಮಾಡಿದ್ದರು. 

ಬದ್ರಿನಾಥ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಗಣ್ಯರು ಸಾಮಾಜಿಕ ಮಾಧ್ಯಮಗಳ ಮೂಲಕ ಸಂತಾಪ ಸೂಚಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT