ಕೋಲ್ಕತ್ತ: ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯಲ್ಲಿ ಸರಸ್ವತಿ ದೇವಿಯ ಮೂರ್ತಿಗಳನ್ನು ಧ್ವಂಸ ಮಾಡಲಾಗಿದೆ ಎಂದು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಆರೋಪಿಸಿದ್ದಾರೆ.

ಮಹಿಷಾದಲ್ನ ಗರ್ಕಮಲ್ಪುರ ಪ್ರದೇಶದಲ್ಲಿ ಭಾನುವಾರ ರಾತ್ರಿ ಸ್ಥಳೀಯ ಕುಶಲಕರ್ಮಿಗಳು ತಯಾರಿಸಿದ್ದ ಸರಸ್ವತಿ ದೇವಿಯ ಮೂರ್ತಿಗಳನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ ಎಂದು ಅಧಿಕಾರಿ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದಾರೆ.

ಜನವರಿ 23ರಂದು ಸರಸ್ವತಿ ಪೂಜೆಯನ್ನು ಆಚರಿಸಲಾಗುತ್ತದೆ. ಆದರೆ, ವಿಧ್ವಂಸಕ ಕೃತ್ಯಗಳು ವಿಗ್ರಹ ತಯಾರಕರಿಗೆ ತೀವ್ರ ಆರ್ಥಿಕ ನಷ್ಟವನ್ನುಂಟು ಮಾಡುತ್ತಿವೆ ಎಂದು ಅವರು ಬೇಸರ ಹೊರಹಾಕಿದ್ದಾರೆ.

ರಾಜ್ಯದ ವಿವಿಧ ಭಾಗಗಳಲ್ಲಿ ಈ ಹಿಂದೆ ಹಲವು ಬಾರಿ ಇದೇ ರೀತಿಯ ಘಟನೆಗಳು ನಡೆದಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಪೊಲೀಸರು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಲ್ಲಿ ವಿಫಲರಾಗಿದ್ದಾರೆ ಎಂದೂ ಅವರು ದೂರಿದ್ದಾರೆ.

ಈ ಘಟನೆ ಹಿಂದೂಗಳ ಮೇಲಿನ ದಾಳಿಗೆ ಸಮನಾಗಿದೆ. ಸರ್ಕಾರ ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದೂ ಅವರು ಆಗ್ರಹಿಸಿದ್ದಾರೆ.

ಸುವೇಂದು ಅಧಿಕಾರಿ ಆರೋಪಗಳ ಕುರಿತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.