ಚೆನ್ನೈ: ಹೊಸ ರಾಜಕೀಯ ಪಕ್ಷ ಸ್ಥಾಪಿಸಿರುವ ವಿ.ಕೆ.ಶಶಿಕಲಾ ಅವರು, ಪಕ್ಷದ ಹೆಸರು ‘ಆಲ್ ಇಂಡಿಯಾ ಪುರಚ್ಚಿ ತಲೈವರ್ ಮಕ್ಕಳ್ ಮುನ್ನೇತ್ರ ಕಳಗಂ’(ಎಐಪಿಟಿಎಂಎಂಕೆ) ಎಂದು ಶುಕ್ರವಾರ ಘೋಷಿಸಿದ್ದಾರೆ.

ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡಿರುವ ಶಶಿಕಲಾ ನೂತನ ಪಕ್ಷ ಸ್ಥಾಪಿಸುವುದಾಗಿ ಇತ್ತೀಚೆಗೆ ಘೋಷಿಸಿದ್ದರು. ಎಐಎಡಿಎಂಕೆ ನಾಯಕಿ, ದಿವಂಗತ ಜೆ.ಜಯಲಲಿತಾ ಅವರ ಜನ್ಮದಿನದ ಅಂಗವಾಗಿ ರಾಮನಾಥಪುರಂ ಜಿಲ್ಲೆಯ ಕಮುದಿಯಲ್ಲಿ ಫೆಬ್ರುವರಿ 24ರಂದು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಕ್ಷದ ಬಾವುಟವನ್ನು ಅನಾವರಣಗೊಳಿಸಿದ್ದರು. ಈಗ, ಪಕ್ಷದ ಹೆಸರನ್ನು ಘೋಷಿಸಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ಪಕ್ಷದ ಚಿಹ್ನೆ ತೆಂಗಿನ ತೋಟ ಆಗಿದ್ದು, ಇದು ಏಕತೆಯನ್ನು ಸೂಚಿಸುತ್ತದೆ. ಈ ಉದ್ದೇಶ ಸಾಧನೆಗಾಗಿ ನಾನು ಯಾವಾಗಲೂ ಶ್ರಮಿಸುತ್ತಿದ್ದೇನೆ’ ಎಂದು ಹೇಳಿದರು.

‘ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸಮಾನ ಮನಸ್ಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲಾಗುವುದು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ತಮಿಳುನಾಡು ಜನರ ಏಳಿಗೆಗಾಗಿ ನಾವು ಒಳ್ಳೆಯ ಕೆಲಸ ಮಾಡಬೇಕು. ಇದಕ್ಕಾಗಿ ನಮ್ಮ ಆಲೋಚನೆ ಮತ್ತು ಸಿದ್ಧಾಂತಗಳಿಗೆ ಹೊಂದಿಕೆಯಾಗುವ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲಾಗುವುದು’ ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.