ತಪ್ಪಿತಸ್ಥರನ್ನು ಶಿಕ್ಷಿಸಿ: ವೈದ್ಯರ ಸಂಘಗಳ ಆಗ್ರಹ
ಅತ್ಯಾಚಾರ ಮತ್ತು ಮಾನಸಿಕ ಕಿರುಕುಳಕ್ಕೊಳಗಾಗಿ ಆತ್ಮಹತ್ಯೆಗೈದ ವೈದ್ಯಯ ಸಾವಿನ ಪ‍್ರಕರಣದ ಬಗ್ಗೆ ಭಾರತೀಯ ವೈದ್ಯಕೀಯ ಸಂಘ–ಮಹಾರಾಷ್ಟ್ರ ರಾಜ್ಯ (ಐಎಂಎ) ಮತ್ತು ಅಖಿಲ ಭಾರತ ವೈದ್ಯಕೀಯ ಸಂಘಗಳ ಒಕ್ಕೂಟ (ಎಫ್‌ಎಐಎಂಎ) ಆಕ್ರೋಶ ವ್ಯಕ್ತಪಡಿಸಿದೆ. ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಮಾಹಿತಿ ಬಹಿರಂಗಪಡಿಸುವವರಿಗೆ ರಕ್ಷಣೆ ಒದಗಿಸಬೇಕು ಎಂದು ಸಂಘಗಳು ಒತ್ತಾಯಿಸಿವೆ.