ಉಗ್ರರಿಗೆ ನೆರವು ನೀಡುತ್ತಿದ್ದ ವ್ಯಕ್ತಿಯೊಬ್ಬನನ್ನು ಭದ್ರತಾ ಸಿಬ್ಬಂದಿ ಕುಪ್ವಾಡ ಜಿಲ್ಲೆಯಲ್ಲಿ ಸೋಮವಾರ ಬಂಧಿಸಿದ್ದಾರೆ. ಬಂಧಿತನನ್ನು ಮಾರ್ಸರಿ ಗ್ರಾಮದ ನಿವಾಸಿ ವಾಲಿ ಮೊಹಮ್ಮದ್ ಮೀರ್ ಎಂದು ಗುರುತಿಸಲಾಗಿದೆ. ಆತನಿಂದ ಶಸ್ತ್ರಾಸ್ತ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗುಪ್ತಚರ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ಮೀರ್‌ನನ್ನು ಬಂಧಿಸಲಾಗಿದೆ. ಆತ ವಿವಿಧ ಉಗ್ರ ಸಂಘಟನೆಗಳ ಸಂಪರ್ಕದಲ್ಲಿದ್ದು ಉಗ್ರರಿಗೆ ಶಸ್ತ್ರಾಸ್ತ ಮತ್ತು ಮದ್ದುಗುಂಡುಗಳನ್ನು ಪೂರೈಕೆ ಮಾಡುತ್ತಿದ್ದ ಎಂದು ತಿಳಿದುಬಂದಿದೆ.