ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: ಎಎಪಿ ಮುಖಂಡ ಸತ್ಯೇಂದ್ರ ಜೈನ್‌ ಮಧ್ಯಂತರ ಜಾಮೀನು ವಿಸ್ತರಣೆ

Published 19 ಅಕ್ಟೋಬರ್ 2023, 10:56 IST
Last Updated 19 ಅಕ್ಟೋಬರ್ 2023, 10:56 IST
ಅಕ್ಷರ ಗಾತ್ರ

ನವದೆಹಲಿ: ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್‌ ಅವರಿಗೆ ನೀಡಿದ್ದ ಮಧ್ಯಂತರ ಜಾಮೀನು ಅವಧಿಯನ್ನು ಸುಪ್ರೀಂ ಕೋರ್ಟ್‌ ನ.6ರವರೆಗೆ ವಿಸ್ತರಿಸಿ ಆದೇಶಿಸಿದೆ.

ಜೈನ್‌ ಪರ ಹಾಜರಿದ್ದ ಹಿರಿಯ ವಕೀಲ ಅಭಿಷೇಕ್‌ ಸಿಂಘ್ವಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎ.ಎಸ್‌.ಬೋಪಣ್ಣ ಹಾಗೂ ಬೇಲಾ ಎಂ.ತ್ರಿವೇದಿ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿತು.

‘ಜಾಮೀನು ಅರ್ಜಿಯ ವಿಚಾರಣೆಯನ್ನು ನ.6ರಂದು ನಡೆಸಲಾಗುವುದು. ಈಗಾಗಲೇ ನೀಡಿರುವ ಮಧ್ಯಂತರ ಜಾಮೀನನ್ನು ಮುಂದಿನ ವಿಚಾರಣೆ ದಿನದವರೆಗೆ ವಿಸ್ತರಿಸಲಾಗಿದೆ’ ಎಂದು ನ್ಯಾಯಪೀಠ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT