ನವದೆಹಲಿ: ಸೌದಿ ಅರೇಬಿಯಾದ ಮೆಕ್ಕಾ–ಮದೀನಾ ರಸ್ತೆಯಲ್ಲಿ ಖಾಸಗಿ ಬಸ್ ಹಾಗೂ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತೆಲಂಗಾಣದ 40ಕ್ಕೂ ಹೆಚ್ಚು ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ. ಈ ಘಟನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, 'ಮದೀನಾದಲ್ಲಿ ಸಂಭವಿಸಿದ ಅಪಘಾತದಿಂದ ತೀವ್ರ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಈ ನೋವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ನಾವು ನಿಮ್ಮೊಂದಿಗೆ ಇದ್ದೇವೆ' ಎಂದು ತಿಳಿಸಿದ್ದಾರೆ.
.ಗರ್ಭಕಂಠ ಕ್ಯಾನ್ಸರ್: ಇಂಡೋ–ಪೆಸಿಫಿಕ್ಗೆ ಭಾರತದಿಂದ 4 ಕೋಟಿ ಡೋಸ್ HPV ಲಸಿಕೆ.ದೆಹಲಿಯಲ್ಲಿ 8.7 ಡಿಗ್ರಿ ಸೆಲ್ಸಿಯಸ್ಗೆ ಇಳಿದ ತಾಪಮಾನ: ಗಾಳಿಯ ಗುಣಮಟ್ಟವೂ ಕಳಪೆ.
ಈ ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುವುದಾಗಿ ಮೋದಿ ಹೇಳಿದ್ದಾರೆ.

ರಿಯಾದ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ, ಸಾಧ್ಯವಿರುವ ಎಲ್ಲಾ ಸಹಾಯ ಮಾಡುತ್ತಿದೆ. ನಮ್ಮ ಅಧಿಕಾರಿಗಳು ನಿರಂತರವಾಗಿ ಸೌದಿ ಅರೇಬಿಯಾದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಮೋದಿ ತಿಳಿಸಿದ್ದಾರೆ.

ಸೌದಿ ಅರೇಬಿಯಾದ ಮೆಕ್ಕಾ–ಮದೀನಾ ರಸ್ತೆಯಲ್ಲಿ ಖಾಸಗಿ ಬಸ್, ಟ್ಯಾಂಕರ್ಗೆ ಅಪ್ಪಳಿಸಿದ ಪರಿಣಾಮ ಬಸ್ ಹೊತ್ತಿ ಉರಿದಿದ್ದು, 45 ಜನ ಮೃತಪಟ್ಟಿರುವುದು ವರದಿಯಾಗಿದೆ. ಮೃತರಲ್ಲಿ ಬಹುತೇಕರು ಭಾರತೀಯರು ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.