ಈ ಸಂಬಂಧ ಸೌದಿಯ ನಾಗರಿಕ ವಿಮಾನಯಾನ ಪ್ರಾಧಿಕಾರವು (ಜಿಎಸಿಎ) ಆದೇಶ ಹೊರಡಿಸಿದ್ದು, ‘ಭಾರತದ ಜತೆಗೆ ಬ್ರೆಜಿಲ್ ಮತ್ತು ಅರ್ಜೆಂಟೈನಾ ದೇಶಗಳಿಗೂ ಈ ನಿರ್ಬಂಧ ಅನ್ವಯವಾಗಲಿದೆ. ಸೌದಿಗೆ ಆಗಮಿಸುವ 14 ದಿನಗಳ ಮುಂಚಿತವಾಗಿ ಪ್ರಸ್ತಾವನೆಯನ್ನು ನೀಡಿರುವ ಯಾವುದೇ ವ್ಯಕ್ತಿಗೂ ಇದು ಅನ್ವಯಿಸುತ್ತದೆ’ ಎಂದು ತಿಳಿಸಿತ್ತು. ಈಮೂರೂ ದೇಶಗಳಿಂದ ಅಧಿಕೃತ ಆಹ್ವಾನ ಹೊಂದಿರುವವರಿಗೆ ಮಾತ್ರವೇ ಸೌದಿಗೆ ಪ್ರಯಾಣಿಸಲು ಅವಕಾಶ ನೀಡಲಾಗುತ್ತದೆ ಎಂದು ಜಿಎಸಿಎ ತಿಳಿಸಿತ್ತು.