ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ₹3,622 ಕೋಟಿ ಮೊತ್ತದ ಚುನಾವಣಾ ಬಾಂಡ್‌ಗಳನ್ನು ಮಾರಾಟ ಮಾಡಿದೆ.

ಪುಣೆಯ ವಿಹಾರ್ ದುರ್ವೆ ಎಂಬವರು ಮಾಹಿತಿ ಹಕ್ಕು ಕಾಯ್ದೆಯ (ಆರ್‌ಟಿಐ) ಮೂಲಕ ಪಡೆದ ದಾಖಲೆಯಲ್ಲಿ ಈ ವಿಚಾರ ಬಹಿರಂಗಗೊಂಡಿದೆ.

ಮಾರ್ಚ್ ತಿಂಗಳಲ್ಲಿ ₹1,365.69 ಕೋಟಿ ಮೊತ್ತದ ಚುನಾವಣಾ ಬಾಂಡ್‌ಗಳು ಮಾರಾಟವಾಗಿವೆ. ಇವುಗಳ ಮಾರಾಟ ಏಪ್ರಿಲ್ ತಿಂಗಳಲ್ಲಿ ಶೇ 65.21ರಷ್ಟು ಏರಿಕೆಯಾಗಿ ₹2,2 56.37 ಕೋಟಿ ಮೊತ್ತದ ಬಾಂಡ್‌ಗಳು ಮಾರಾಟವಾಗಿವೆ ಎಂದು ಎಸ್‌ಬಿಐ ತಿಳಿಸಿದೆ.

ಏಪ್ರಿಲ್‌ನಲ್ಲಿ ಹೆಚ್ಚಿನ ಬಾಂಡ್‌ಗಳು ಮುಂಬೈನಲ್ಲಿ ಮಾರಾಟವಾಗಿವೆ. ಮುಂಬೈನಲ್ಲಿ ₹694 ಕೋಟಿ, ಕೋಲ್ಕತ್ತದಲ್ಲಿ ₹417.31 ಕೋಟಿ, ನವದೆಹಲಿಯಲ್ಲಿ ₹408.62ಕೋಟಿ ಹಾಗೂ ಹೈದರಾಬಾದ್ ಸೇರಿದಂತೆ ಇತರ ನಗರಗಳಲ್ಲಿ ₹338.07 ಕೋಟಿ ಮೊತ್ತದ ಬಾಂಡ್‌ಗಳು ಮಾರಾಟವಾಗಿವೆ ಎಂದು ಹೇಳಿದೆ.

ಹಣಕಾಸು ಸಚಿವಾಲಯ ಅಧಿಸೂಚನೆ ಹೊರಡಿಸಿದ ಬಳಿಕ ಎಸ್‌ಬಿಐ ಶಾಖೆಗಳಲ್ಲಿ ಬಾಂಡ್‌ಗಳ ಮಾರಾಟ ಆರಂಭಗೊಂಡಿತ್ತು.

ಚುನಾವಣಾ ಬಾಂಡ್ ಯೋಜನೆ 2018ರಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿತ್ತು. ಇದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. ಭಾರತದ ಪೌರರಿಗೆ ಮಾತ್ರ ಈ ಬಾಂಡ್ ಖರೀದಿ ಮಾಡಲು ಅವಕಾಶವಿದೆ ಎಂದು ಕಳೆದ ವರ್ಷ ಕೇಂದ್ರ ಸರ್ಕಾರ ಹೇಳಿಕೆಯಲ್ಲಿ ತಿಳಿಸಿತ್ತು.

ರಾಜಕೀಯ ಪಕ್ಷಗಳು ಈ ಬಾಂಡ್‌ಗಳನ್ನು 15 ದಿವಸಗೊಳಗೆ ಅಧಿಕೃತ ಬ್ಯಾಂಕ್ ಖಾತೆಯ ಮೂಲಕ ನಗದು ರೂಪದಲ್ಲಿ ಪಡೆದುಕೊಳ್ಳಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.