ನವದೆಹಲಿ: ಹಣಕಾಸು ಅವ್ಯವಹಾರಗಳ ಸಂಬಂಧ ಕ್ರಿಮಿನಲ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಮತ್ತು ಸಿಬಿಐನಿಂದ ತನಿಖೆ ಎದುರಿಸುತ್ತಿರುವ ಕಾರ್ತಿ ಚಿದಂಬರಂ ಇದೇ ತಿಂಗಳಲ್ಲಿ ಅಮೆರಿಕ, ಜರ್ಮನಿ ಮತ್ತು ಸ್ಪೇನ್ ದೇಶಗಳಿಗೆ ತೆರಳಲು ಸುಪ್ರೀಂ ಕೋರ್ಟ್ ಮಂಗಳವಾರ ಅನುಮತಿ ನೀಡಿದೆ.

ಈ ಹಿಂದೆ ವಿಧಿಸಿದ್ದ ಷರತ್ತುಗಳನ್ನು ಅನುಸರಿಸಿದಲ್ಲಿ ವಿದೇಶಿ ಪ್ರಯಾಣ ಕೈಗೊಳ್ಳಬಹುದು ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯಿ ಮತ್ತು ನ್ಯಾಯಮೂರ್ತಿಗಳಾದ ದೀಪಕ್ ಗುಪ್ತಾ, ಸಂಜೀವ್ ಖನ್ನಾ ಅವರನ್ನೊಳಗೊಂಡ ಪೀಠ ಹೇಳಿದೆ.

ಸುಪ್ರೀಂ ಕೋರ್ಟ್‌ನ ಮಹಾ ಕಾರ್ಯದರ್ಶಿಯವರಲ್ಲಿ ₹ 10 ಕೋಟಿ ಠೇವಣಿ ಇರಿಸಿ ವಿದೇಶಿ ಪ್ರಯಾಣ ಬೆಳೆಸಬಹುದು ಎಂದು ಕಳೆದ ಜನವರಿಯಲ್ಲಿ ಸುಪ್ರೀಂ ಕೋರ್ಟ್ ಕಾರ್ತಿ ಚಿದಂಬರಂಗೆ ಷರತ್ತುಬದ್ಧ ಅನುಮತಿ ನೀಡಿತ್ತು.

ಆರಂಭದಲ್ಲಿ ತನಿಖಾ ಸಂಸ್ಥೆ ಕಾರ್ತಿ ಅವರ ವಿದೇಶ ಪ್ರಯಾಣಕ್ಕೆ ವಿರೋಧ ವ್ಯಕ್ತಪಡಿಸಿತ್ತು. ತನಿಖೆಯಿಂದ ತಪ್ಪಿಸಿಕೊಳ್ಳಲು ವಿದೇಶಿ ಪ್ರಯಾಣ ಬಯಸುತ್ತಿದ್ದಾರೆ. ಕಾರ್ತಿ ಅವರು ತನಿಖೆಗೆಸಹಕಾರ ನೀಡದ ಕಾರಣ ವಿಳಂಬವಾಗುತ್ತಿದೆ ಎಂದು ತನಿಖಾ ಸಂಸ್ಥೆ ಅಭಿಪ್ರಾಯಪಟ್ಟಿತ್ತು. ಕಾರ್ತಿ ಚಿದಂಬರಂ ಕಳೆದ 6 ತಿಂಗಳಲ್ಲಿ 51 ದಿನಗಳನ್ನು ವಿದೇಶದಲ್ಲಿ ಕಳೆದಿದ್ದಾರೆ. ಸುಪ್ರೀಂ ಕೋರ್ಟ್ ನೀಡಿರುವ ಸ್ವಾತಂತ್ರ್ಯವನ್ನು ಅವರು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.