ನವದೆಹಲಿ: ಚೆಕ್‌ಬೌನ್ಸ್ ಪ್ರಕರಣಗಳ ವಿಚಾರಣೆಯನ್ನು ತ್ವರಿತವಾಗಿ ನಡೆಸಬೇಕು ಎಂಬುದಕ್ಕೆ ಸಂಬಂಧಿಸಿದಂತೆ ನಾಲ್ಕು ವಾರಗಳ ಒಳಗಾಗಿ ಪ್ರತಿಕ್ರಿಯೆ ಸಲ್ಲಿಸುವಂತೆ ವಿವಿಧ ಹೈಕೋರ್ಟ್‌ಗಳಿಗೆ ಸುಪ್ರೀಂಕೋರ್ಟ್ ಮಂಗಳವಾರ ಸೂಚಿಸಿದೆ.

ಚೆಕ್‌ಬೌನ್ಸ್ ಪ್ರಕರಣಗಳಿಗೆ ಸಂಬಂಧಿಸಿ ಸುಪ್ರೀಂಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ವಿಚಾರಣೆ ನಡೆಸುತ್ತಿದೆ.

ಮುಖ್ಯನ್ಯಾಯಮೂರ್ತಿ ಎಸ್.ಎ.ಬೊಬಡೆ ನೇತೃತ್ವದ ಮೂವರು ನ್ಯಾಯಾಧೀಶರನ್ನು ಒಳಗೊಂಡ ನ್ಯಾಯಪೀಠ, ‘ಹೈಕೋರ್ಟ್‌ಗಳು ತಮ್ಮ ರಿಜಿಸ್ಟ್ರಾರ್ ಜನರಲ್‌ಗಳ ಮೂಲಕ, ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ತಮ್ಮ ಡಿಜಿಪಿಗಳ ಮೂಲಕ ಪ್ರತಿಕ್ರಿಯೆ ಸಲ್ಲಿಸಬೇಕು’ ಎಂದು ಸೂಚಿಸಿತು.

25 ಹೈಕೋರ್ಟ್‌ಗಳ ಪೈಕಿ 14 ಹೈಕೊರ್ಟ್‌ಗಳು ಮಾತ್ರ ಈ ಸಂಬಂಧ ವರದಿ ಸಲ್ಲಿಸಿವೆ. 11 ಹೈಕೋರ್ಟ್‌ಗಳು ತಾವು ಕೈಗೊಂಡ ಕ್ರಮಗಳ ಕುರಿತ ಕರಡನ್ನು ಸಲ್ಲಿಸಿವೆ. 7 ಜನ ಡಿಜಿಗಳು ವರದಿ ಸಲ್ಲಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.