ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ಆಯುಕ್ತರ ನೇಮಕ: ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಪೀಠ

Last Updated 17 ಏಪ್ರಿಲ್ 2023, 16:26 IST
ಅಕ್ಷರ ಗಾತ್ರ

ನವದೆಹಲಿ: ಚುನಾವಣಾ ಆಯುಕ್ತರನ್ನಾಗಿ ಅರುಣ್‌ ಗೋಯಲ್‌ ಅವರನ್ನು ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯಿಂದ ನ್ಯಾಯಮೂರ್ತಿ ಕೆ.ಎಂ. ಜೋಸೆಫ್‌ ನೇತೃತ್ವದ ನ್ಯಾಯಪೀಠವು ಹಿಂದೆ ಸರಿದಿದೆ.

‘ಇನ್ನೊಂದು ನ್ಯಾಯಪೀಠವು ಈ ಅರ್ಜಿಯ ವಿಚಾರಣೆ ನಡೆಸಲು ಪಟ್ಟಿಮಾಡಲಾಗಿದೆ’ ಎಂದು ನ್ಯಾಯಮೂರ್ತಿಗಳಾದ ಜೋಸೆಫ್‌ ಮತ್ತು ಬಿ.ವಿ. ನಾಗರತ್ನಾ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ.

ವಿಚಾರಣೆಯಿಂದ ಹಿಂದೆ ಸರಿಯುವ ಮೊದಲು ಪೀಠವು, ‘ಗೋಯಲ್‌ ಅವರನ್ನು ನೇಮಕ ಮಾಡುವಾಗ ಯಾವ ನಿಯಮಗಳನ್ನು ಉಲ್ಲಂಘಿಸಲಾಗಿದೆ’ ಎಂದು ಅರ್ಜಿ ಸಲ್ಲಿಸಿದ್ದ ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌ ಎಂಬ ಎನ್‌ಜಿಒವನ್ನು ಪ್ರಶ್ನಿಸಿದೆ.

ಚುನಾವಣಾ ಆಯೋಗದ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿ ಮಾರ್ಚ್‌ 2ರಂದು ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಆಧರಿಸಿ ಈ ಅರ್ಜಿ ಸಲ್ಲಿಸಲಾಗಿದೆ ಎಂದೂ ನ್ಯಾಯಪೀಠ ಹೇಳಿದೆ.

ಎನ್‌ಜಿಒ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ವಕೀಲ ಪ್ರಶಾಂತ್‌ ಭೂಷಣ್ ಅವರು,‘ ಸರ್ಕಾರದ ಆಯ್ಕೆ ಪ್ರಕ್ರಿಯೆ ಪ್ರಶ್ನಾರ್ಹವಾಗಿದೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT