ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪ್ರಧಾನ್‌ ಪತಿ’ ವ್ಯವಸ್ಥೆ ಪ್ರಶ್ನಿಸಿದ್ದ ಪಿಐಎಲ್‌ ವಿಚಾರಣೆಗೆ ಸುಪ್ರೀಂ ಕೋರ್ಟ್‌ ನಕಾರ

Published 6 ಜುಲೈ 2023, 14:35 IST
Last Updated 6 ಜುಲೈ 2023, 14:35 IST
ಅಕ್ಷರ ಗಾತ್ರ

ನವದೆಹಲಿ: ಸ್ಥಳೀಯಾಡಳಿತ ಸಂಸ್ಥೆಗಳ ಮೀಸಲು ಕ್ಷೇತ್ರಗಳಲ್ಲಿ ಚುನಾಯಿತರಾಗುವ ಮಹಿಳೆಯರ ಅಧಿಕಾರದಲ್ಲಿ ಪತಿಯ ಹಸ್ತಕ್ಷೇಪವನ್ನು ತಡೆಯುವ ನಿಟ್ಟಿನಲ್ಲಿ ಸಮಿತಿಯೊಂದನ್ನು ರಚಿಸಲು ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ವಿಚಾರಣೆಗೆ ಸುಪ್ರೀಂ ಕೋರ್ಟ್‌ ಗುರುವಾರ ನಿರಾಕರಿಸಿದೆ.

ಉತ್ತರ ಭಾರತದಲ್ಲಿ ಈ ವ್ಯವಸ್ಥೆಗೆ  ‘ಪ್ರಧಾನ್‌ ಪತಿ’ ಎನ್ನಲಾಗುತ್ತಿದ್ದು, ಬಹುತೇಕ ಗ್ರಾಮೀಣ ಪ್ರದೇಶಗಳಲ್ಲಿ ಚಾಲ್ತಿಯಲ್ಲಿದೆ.

‘ಸಮಸ್ಯೆ ಇರುವುದು ನಿಜ. ಆದರೆ ಇದು ಆಡಳಿತದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸುವ ವಿಚಾರದಲ್ಲಿ ಭಾರತದಲ್ಲಿರುವ ವಿಕಸನ ಪ್ರಕ್ರಿಯೆಯ ಭಾಗವಾಗಿದೆ’ ಎಂದು ನ್ಯಾಯಮೂರ್ತಿಗಳಾದ ಸಂಜಯ್‌ ಕಿಶನ್‌ ಕೌಲ್‌ ಮತ್ತು ಸುಧಾಂಶು ಧುಲಿಯಾ ಅವರನ್ನೊಳಗೊಂಡ ನ್ಯಾಯಪೀಠವು ಅಭಿಪ್ರಾಯಪಟ್ಟಿದೆ.

ಮುಂಡೋನಾ ರೂರಲ್ ಡೆವಲಪ್‌ಮೆಂಟ್ ಫೌಂಡೇಶನ್ ನ್ಯಾಯಾಲಯಕ್ಕೆ ಪಿಐಎಲ್‌ ಸಲ್ಲಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT