ನವದೆಹಲಿ: ದೇಶದ ಪ್ರಮುಖ ರಾಜಕೀಯ ಪಕ್ಷಗಳನ್ನು ಮಾಹಿತಿ ಹಕ್ಕು ಕಾಯ್ದೆ (ಆರ್ಟಿಐ) ವ್ಯಾಪ್ತಿಗೆ ತರುವಂತೆ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (ಪಿಐಎಲ್) ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ.

‘ಈ ಅರ್ಜಿಗಳನ್ನು ಈಗ ವಿಚಾರಣೆಗೆ ಕೈಗೆತ್ತಿಕೊಳ್ಳುವುದಿಲ್ಲ. ಬಹುಶಃ ಮೇ 15ರಂದು ವಿಚಾರಣೆಗೆ ಬರಬಹುದು’ ಎಂದು ಮುಖ್ಯ ನ್ಯಾಯಮೂರ್ತಿ ಖನ್ನಾ ಅವರು ಗುರುವಾರ ಹೇಳಿದ್ದಾರೆ. ಅವರು ತಮ್ಮ ಸ್ಥಾನದಿಂದ ಮೇ 13ರಂದು ನಿವೃತ್ತರಾಗಲಿದ್ದಾರೆ.

‘ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್’ (ಎಡಿಆರ್) ಹಾಗೂ ವಕೀಲ ಅಶ್ವಿನಿ ಉಪಾಧ್ಯಾಯ ಅವರು ಸಲ್ಲಿಸಿರುವ ಪಿಐಎಲ್ ಅನ್ನು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಹಾಗೂ ನ್ಯಾಯಮೂರ್ತಿ ಸಂಜೀವ್ ಕುಮಾರ್ ಅವರಿದ್ದ ಪೀಠವು ವಿಚಾರಣೆ ನಡೆಸಬೇಕಿತ್ತು.

ಅರ್ಜಿ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರ, ಚುನಾವಣಾ ಆಯೋಗ ಹಾಗೂ ಕಾಂಗ್ರೆಸ್, ಬಿಜೆಪಿ ಸೇರಿ ಪ್ರಮುಖ 6 ರಾಜಕೀಯ ಪಕ್ಷಗಳಿಗೆ ಸುಪ್ರೀಂ ಕೋರ್ಟ್ ಫೆ. 14ರಂದು ಸೂಚಿಸಿತ್ತು.

ತಮ್ಮ ಅರ್ಜಿಯು ಕಳೆದ 10 ವರ್ಷಗಳಿಂದಲೂ ಇತ್ಯರ್ಥವಾಗದೆ ಉಳಿದಿದೆ ಎಂದು ಎಡಿಆರ್ ಪರ ವಕೀಲ ಪ್ರಶಾಂತ್ ಭೂಷಣ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.