ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅಬಕಾರಿ ನೀತಿ ಹಗರಣ: ಕೇಜ್ರಿವಾಲ್ ಜಾಮೀನು ಅರ್ಜಿ ವಿಚಾರಣೆ ಸೆ.5ಕ್ಕೆ ಮುಂದೂಡಿಕೆ

Published : 23 ಆಗಸ್ಟ್ 2024, 6:44 IST
Last Updated : 23 ಆಗಸ್ಟ್ 2024, 6:44 IST
ಫಾಲೋ ಮಾಡಿ
Comments

ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಸಿಬಿಐನಿಂದ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ.

ಈ ಬಗ್ಗೆ ಪ್ರತಿ ಅಫಿಡವಿಟ್ ಸಲ್ಲಿಸಲು ಸಿಬಿಐಗೆ ಸಮಯ ನೀಡಿದ ಸೂರ್ಯ ಕಾಂತ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠವು ಉತ್ತರಿಸಲು ಕೇಜ್ರಿವಾಲ್ ಅವರಿಗೆ ಎರಡು ದಿನಗಳ ಕಾಲಾವಕಾಶ ನೀಡಿತು

ಒಂದು ಅರ್ಜಿಗೆ ಮಾತ್ರ ಸಿಬಿಐ ಪ್ರತಿಯಾಗಿ ಅಫಿಡವಿಟ್ ಸಲ್ಲಿಸಿದೆ. ಅದೂ ಕೂಡ ಗುರುವಾರ ರಾತ್ರಿ 8 ಗಂಟೆಗೆ ಸಲ್ಲಿಸಲಾಗಿದೆ ಎಂದು ಕೇಜ್ರಿವಾಲ್‌ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್‌ ಎಸ್‌.ವಿ ರಾಜು, ಇನ್ನೊಂದು ಅರ್ಜಿಗೆ ಪ್ರತಿಯಾಗಿ ಒಂದು ವಾರದಲ್ಲಿ ಅಫಿಡವಿಟ್ ಸಲ್ಲಿಸುವುದಾಗಿ ಹೇಳಿದರು. ಹೀಗಾಗಿ ಸೆಪ್ಟೆಂಬರ್ 5ಕ್ಕೆ ಕೋರ್ಟ್ ವಿಚಾರಣೆಯನ್ನು ಮುಂದೂಡಿತು.

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜೂನ್ 26 ರಂದು ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿತ್ತು .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT