ನವದೆಹಲಿ: ವಿದ್ಯುತ್ ದರ ನಿಗದಿ ಕುರಿತ ಷರತ್ತುಗಳಿಗೆ ಸಂಬಂಧಿಸಿದಂತೆ ಮೂರು ತಿಂಗಳೊಳಗೆನಿರ್ದಿಷ್ಟ ನಿಯಮಾವಳಿಗಳನ್ನು ರೂಪಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಎಲ್ಲಾ ರಾಜ್ಯಗಳ ವಿದ್ಯುತ್ ನಿಯಂತ್ರಣ ಆಯೋಗಗಳಿಗೆ ನಿರ್ದೇಶಿಸಿದೆ.

ಮಹಾರಾಷ್ಟ್ರ ರಾಜ್ಯ ವಿದ್ಯುತ್ ನಿಯಂತ್ರಣ ಆಯೋಗವು (ಎಂಇಆರ್‌ಸಿ) ಅದಾನಿ ಎಲೆಕ್ಟ್ರಿಸಿಟಿ ಮುಂಬೈ ಇನ್ಫ್ರಾ ಲಿಮಿಟೆಡ್‌ಗೆ (ಎಇಎಂಐಎಲ್)ವಿದ್ಯುತ್ ಪ್ರಸರಣ ಪರವಾನಗಿ ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ ಟಾಟಾ ಪವರ್ ಕಂಪನಿ ಲಿಮಿಟೆಡ್ ಟ್ರಾನ್ಸ್‌ಮಿಷನ್ (ಟಿಪಿಸಿ–ಟಿ)ವಿದ್ಯುತ್ ಮೇಲ್ಮನವಿ ನ್ಯಾಯಮಂಡಳಿಗೆ (ಎಪಿಟಿಇಎಲ್) ಅರ್ಜಿ ಸಲ್ಲಿಸಿತ್ತು. ಅದನ್ನು ಎಪಿಟಿಇಎಲ್ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಟಾಟಾ ಪವರ್ ಕಂಪನಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

ಬುಧವಾರ ಇದರ ವಿಚಾರಣೆ ನಡೆಸಿದಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ಜೆ.ಬಿ.ಪಾರ್ದಿವಾಲಾ ಅವರನ್ನೊಳಗೊಂಡ ತ್ರಿಸದಸ್ಯ ನ್ಯಾಯಪೀಠವುಎಇಎಂಐಎಲ್ ತೀರ್ಪನ್ನು ಎತ್ತಿಹಿಡಿಯಿತು. ಟಾಟಾ ಕಂಪನಿಯ ಮೇಲ್ಮನವಿ ವಜಾಗೊಳಿಸಿತು.

‘ನ್ಯಾಯಾಲಯವು ತೀರ್ಪು ಪ್ರಕಟಿಸಿದ ದಿನದಿಂದ (ಬುಧವಾರ) ಮೂರು ತಿಂಗಳೊಳಗೆ ವಿದ್ಯುತ್ ಕಾಯ್ದೆಯ ಸೆಕ್ಷನ್ 181ರ ಅಡಿಯಲ್ಲಿ ನಿಗದಿತ ನಿಯಮಾವಳಿಗಳನ್ನು ರೂಪಿಸುವಂತೆ ಎಲ್ಲಾವಿದ್ಯುತ್ ನಿಯಂತ್ರಣ ಆಯೋಗಗಳಿಗೆ ನಾವು ನಿರ್ದೇಶಿಸುತ್ತಿದ್ದೇವೆ’ ಎಂದು ನ್ಯಾಯಪೀಠ ಹೇಳಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.