ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಂಗವಿಕಲರಿಗೆ ಸಾಮಾಜಿಕ ಭದ್ರತೆ: 6 ವಾರಗಳೊಳಗೆ ಮಾಹಿತಿ ಸಂಗ್ರಹಕ್ಕೆ ಸೂಚನೆ

Published 30 ಅಕ್ಟೋಬರ್ 2023, 15:36 IST
Last Updated 30 ಅಕ್ಟೋಬರ್ 2023, 15:36 IST
ಅಕ್ಷರ ಗಾತ್ರ

ನವದೆಹಲಿ: ಅಂಗವಿಕಲರಿಗಾಗಿ ಜಾರಿಗೊಳಿಸಲಾಗಿರುವ ಸಾಮಾಜಿಕ ಭದ್ರತೆ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಆರು ವಾರಗಳ ಒಳಗಾಗಿ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಸಂಗ್ರಹಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೋಮವಾರ ಸೂಚಿಸಿದೆ.

ಸಾಮಾಜಿಕ ಭದ್ರತೆ ಯೋಜನೆಗಳ ಪ್ರಯೋಜನ ಪಡೆಯುತ್ತಿರುವ ಇತರರಿಗಿಂತ ಶೇ 25ರಷ್ಟು ಹೆಚ್ಚು ನೆರವನ್ನು ಅಂಗವಿಕಲರಿಗೆ ಒದಗಿಸುವ ಕಾಯ್ದೆಯ ಅನುಷ್ಠಾನಕ್ಕೆ ಸಂಬಂಧಿಸಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್‌ ಈ ನಿರ್ದೇಶನ ನೀಡಿದೆ.

ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌, ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದೀವಾಲಾ ಹಾಗೂ ಮನೋಜ್‌ ಮಿಶ್ರಾ ಅವರಿದ್ದ ಪೀಠ ಅರ್ಜಿ ವಿಚಾರಣೆ ನಡೆಸಿತು. ದೆಹಲಿ ಮೂಲದ ಭೂಮಿಕಾ ಟ್ರಸ್ಟ್‌ ಅರ್ಜಿ ಸಲ್ಲಿಸಿದೆ. 

ಈ ವಿಷಯದಲ್ಲಿ ಕೋರ್ಟ್‌ಗೆ ನೆರವು ನೀಡುವಂತೆ ಹೆಚ್ಚುವರಿ ಸಾಲಿಸಿಟರ್‌ ಜನರಲ್ ಐಶ್ವರ್ಯಾ ಭಾಟಿ ಅವರಿಗೆ ನ್ಯಾಯಪೀಠ ಮನವಿ ಮಾಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT