ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

17 ವಿದೇಶಿಯರನ್ನು ದೇಶದಿಂದ ಹೊರಗೆ ಕಳುಹಿಸಲು ಸೂಚನೆ: ಸುಪ್ರೀಂ ಕೋರ್ಟ್

Published 16 ಮೇ 2024, 18:38 IST
Last Updated 16 ಮೇ 2024, 18:38 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಅಸ್ಸಾಂನ ಬಂಧನ ಕೇಂದ್ರದಲ್ಲಿ ಇರುವ 17 ಮಂದಿ ವಿದೇಶಿಯರನ್ನು ದೇಶದಿಂದ ಹೊರಗೆ ಕಳುಹಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಗುರುವಾರ ಸೂಚನೆ ನೀಡಿದೆ. ಇವರ ವಿರುದ್ಧ ಯಾವುದೇ ಪ್ರಕರಣ ಬಾಕಿ ಇಲ್ಲ ಎಂದು ಅದು ಹೇಳಿದೆ.

ಅಸ್ಸಾಂ ರಾಜ್ಯದ ಕಾನೂನು ಸೇವೆಗಳ ಪ್ರಾದಿಕಾರ ಸಲ್ಲಿಸಿದ ವರದಿಯನ್ನು ಪರಿಗಣಿಸಿದ ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕ ಮತ್ತು ಉಜ್ವಲ್ ಭೂಯಿಯಾಂ ಅವರು ಇದ್ದ ವಿಭಾಗೀಯ ಪೀಠವು, ಈ ಸೂಚನೆ ನೀಡಿದೆ.

‘ಇವರ ವಿರುದ್ಧ ಯಾವುದೇ ಪ್ರಕರಣ ದಾಖಲಾಗದೆ ಇರುವ ಕಾರಣ ಇವರನ್ನು ದೇಶದಿಂದ ಹೊರಗಡೆ ಕಳುಹಿಸುವುದಕ್ಕೆ ಕೇಂದ್ರ ಸರ್ಕಾರವು ತಕ್ಷಣವೇ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದು ನಮ್ಮ ಅಭಿಪ್ರಾಯ’ ಎಂದು ಪೀಠವು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT