ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಂದ್ರಬಾಬು ನಾಯ್ಡು ನಿರೀಕ್ಷಣಾ ಜಾಮೀನು ಪ್ರಶ್ನಿಸಿದ್ದ ಅರ್ಜಿ ವಜಾ

Published 29 ಜನವರಿ 2024, 15:37 IST
Last Updated 29 ಜನವರಿ 2024, 15:37 IST
ಅಕ್ಷರ ಗಾತ್ರ

ನವದೆಹಲಿ: ಅಮರಾವತಿ ಒಳ ವರ್ತುಲ ರಸ್ತೆಯ ಹಗರಣಕ್ಕೆ ಸಂಬಂಧಿಸಿ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರಿಗೆ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಪ್ರಶ್ನಿಸಿ ಆಂಧ್ರಪ್ರದೇಶ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ.

ಮಧ್ಯಂತರ ಜಾಮೀನಿನಡಿ ನಾಯ್ಡು ಬಿಡುಗಡೆಗೆ ಹೈಕೋರ್ಟ್‌ ಜನವರಿ 10ರಂದು ನೀಡಿದ್ದ ಆದೇಶ ರದ್ದತಿಗೆ ಕೋರಿ ಆಂಧ್ರಪ್ರದೇಶ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಪರಿಶೀಲಿಸಿದ ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಮತ್ತು ದೀಪಾಂಕರ್‌ ದತ್ತ ಅವರಿದ್ದ ನ್ಯಾಯಪೀಠವು ಅರ್ಜಿಯನ್ನು ತಿರಸ್ಕರಿಸಿದೆ.

‘ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದಿನ ಆದೇಶಗಳನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರದ ಮನವಿಯನ್ನು ತಿರಸ್ಕರಿಲಾಗಿದೆ’ ಎಂದು ಕೋರ್ಟ್ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT