ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವವನ್ನು ಪುನರ್ ಸ್ಥಾಪಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ಅಲ್ಲದೇ, ಅರ್ಜಿದಾರರಾದ ವಕೀಲ ಅಶೋಕ್ ಪಾಂಡೆ ಅವರಿಗೆ ₹1 ಲಕ್ಷ ದಂಡ ವಿಧಿಸಿದೆ.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರಿದ್ದ ಏಕಸದಸ್ಯ ನ್ಯಾಯಪೀಠವು, ‘ಅರ್ಜಿ ಸಲ್ಲಿಕೆಯು ನ್ಯಾಯಸಮ್ಮತವಾಗಿಲ್ಲ’ ಎಂದು ಹೇಳಿತು.

2019ರ ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ಕೋಲಾರಕ್ಕೆ ಭೇಟಿ ನೀಡಿದ್ದ ರಾಹುಲ್, ‘ಮೋದಿ’ ಉಪನಾಮದ ಬಗ್ಗೆ ಅಪಮಾನಕರವಾಗಿ ಮಾತನಾಡಿದ್ದಾರೆ ಎಂದು ಮಾನನಷ್ಟ ಪ್ರಕರಣ ದಾಖಲಿಸಲಾಗಿತ್ತು.

ಗುಜರಾತ್ನ ಬಿಜೆಪಿ ನಾಯಕ ಪೂರ್ಣೇಶ್ ಮೋದಿ ದಾಖಲಿಸಿದ್ದ ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೂರತ್ನ ಚೀಫ್ ಜುಡಿಷಿಯಲ್ ಮ್ಯಾಜಿಸ್ಟ್ರೇಟ್, ರಾಹುಲ್ ಅವರು ಅಪರಾಧಿ ಎಂದು ತೀರ್ಪು ನೀಡಿದ್ದರು. ಇದಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು. ಬಳಿಕ ಲೋಕಸಭಾ ಸಚಿವಾಲಯವು ರಾಹುಲ್ ಅವರ, ಸಂಸತ್ ಸದಸ್ಯತ್ವವನ್ನು ಪುನರ್ ಸ್ಥಾಪಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.