ನವದೆಹಲಿ: ಜಾತಿ ವ್ಯವಸ್ಥೆ ಅಸಾಂವಿಧಾನಿಕ ಎಂದು ಘೋಷಿಸಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ವಾಜೀರ್ ಸಿಂಗ್ ಪೂನಿಯಾ ಅವರು ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರ ನೇತೃತ್ವದ ಪೀಠವು, ‘ವಿಚಾರಣಾಯೋಗ್ಯವಾದ ಯಾವುದೇ ಅಂಶ ಇಲ್ಲಿ ಇಲ್ಲ’ ಎಂದು ಹೇಳಿದೆ.
‘ಸಂವಿಧಾನದ ಮೂಲ ಕರಡುವಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಲ್ಲೇಖವಿದೆ’ ಎಂದು ನ್ಯಾಯಾಲಯ ತಿಳಿಸಿದೆ.
ಜಾತಿ ವ್ಯವಸ್ಥೆಯು ಮೂಲಭೂತ ಹಕ್ಕುಗಳಿಗೆ ವಿರುದ್ಧವಾದದ್ದು, ಅದನ್ನು ಅಸಾಂವಿಧಾನಿಕವೆಂದು ಪರಿಗಣಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದರು.