ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚುನಾವಣಾ ಬಾಂಡ್‌ ಮಾರಾಟಕ್ಕೆ ತಡೆ ನೀಡಲು ಕೋರಿದ್ದ ಅರ್ಜಿ ತಿರಸ್ಕಾರ

ಸುಪ್ರೀಂ ಕೋರ್ಟ್‌
Last Updated 26 ಮಾರ್ಚ್ 2021, 10:19 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗಳಿಗೆ ಮುನ್ನ ಮತ್ತಷ್ಟು ಚುನಾವಣಾ ಬಾಂಡ್‌ಗಳನ್ನು ಮಾರಾಟ ಮಾಡುವುದಕ್ಕೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

ಈ ಕುರಿತು ‘ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್’ ಎನ್ನುವ ಸರ್ಕಾರೇತರ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬಡೆ ನೇತೃತ್ವದ ನ್ಯಾಯಪೀಠ ತಿರಸ್ಕರಿಸಿದೆ.

'ದೇಶದಲ್ಲಿ ನಡೆಯುತ್ತಿರುವ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಮುನ್ನ ಚುನಾವಣಾ ಬಾಂಡ್‌ಗಳ ಮಾರಾಟಕ್ಕೆ ಅವಕಾಶ ನೀಡುವುದರಿಂದ ರಾಜಕೀಯ ಪಕ್ಷಗಳ ಅಕ್ರಮ ಹಣ ಹಂಚಿಕೆ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದೆ' ಎಂದು ಸರ್ಕಾರೇತರ ಸಂಸ್ಥೆ ಅರ್ಜಿಯಲ್ಲಿ ಉಲ್ಲೇಖಿಸಿತ್ತು.

ಏಪ್ರಿಲ್ 1ರಿಂದ 10ರವರೆಗೆ ಚುನಾವಣಾ ಬಾಂಡ್‌ಗಳನ್ನು ಮಾರಾಟ ಮಾಡುವುದಾಗಿ ಕೇಂದ್ರ ಸರ್ಕಾರವು ಈ ಹಿಂದೆ, ನ್ಯಾಯಮೂರ್ತಿಗಳಾದ ಎ.ಎಸ್‌.ಬೋಪಣ್ಣ ಮತ್ತು ವಿ.ರಾಮಸುಬ್ರಮಣಿಯನ್ ಅವರನ್ನೊಳಗೊಂಡ ಪೀಠಕ್ಕೆ ತಿಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT